ಅಂಬಿಗರ ಚೌಡಯ್ಯ ಕಾಯಕ ನಿಷ್ಠೆ ಸರ್ವರಿಗೂ ಮಾದರಿ

220122 Devadurga Ambigara Choudayya Jayanti
ದೇವದುರ್ಗದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಿಸಲಾಯಿತು.
Published on

ದೇವದುರ್ಗ: ನಿಜಶರಣ ಅಂಬಿಗರ ಚೌಡಯ್ಯರ ಕಾಯಕ ನಿಷ್ಠೆ ಸರ್ವರಿಗೂ ಮಾದರಿ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿ ಮಾನಪ್ಪ ಬಡಿಗೇರ ಹೇಳಿದರು. ಪಟ್ಟಣದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು. ವಚನಗಳ ಮೂಲಕ ಚೌಡಯ್ಯ ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದ್ದರು. ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net