ಮಾಸಿಕ 12ಸಾವಿರ ವೇತನ ನೀಡಿ; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

14072020 Devadurga Anganawadi workers protest
Published on

ದೇವದುರ್ಗ: ಮಕ್ಕಳು, ಗರ್ಭಿಣಿ, ಬಾಣಂತಿಯರ ಆರೋಗ್ಯ ಕಾಪಾಡುವಲ್ಲಿ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ನೌಕರರಿಗೆ ಮಾಸಿಕ 12ಸಾವಿರ ರೂ. ವೇತನ ನೀಡುವಂತೆ ಒತ್ತಾಯಿಸಿ ಪಟ್ಟಣದ ಮಿನಿವಿಧಾನಸೌಧ ಮುಂದೆ ಸಿಐಟಿಯು ನೇತೃತ್ವದಲ್ಲಿ ಕಾರ್ಯಕರ್ತೆಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಅಪೌಷ್ಟಿಕತೆ, ಕಡಿಮೆ ತೂಕ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರು, ಮಕ್ಕಳು, ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಸಮರ್ಪಕವಾಗಿ ವಿತರಣೆ ಮಾಡುತ್ತಿರುವುದ ಕಾರ್ಯಕರ್ತೆಯರಿಗೆ ಸಮರ್ಪಕ ಸೌಲಭ್ಯ ಸಿಗುತ್ತಿಲ್ಲ ಎಂದು ಆರೋಪಿಸಿದರು. ಕೂಡಲೇ ತಮ್ಮ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net