ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರ ನಿರ್ಮಿಸಿ; ರಾಜ್ಯ ವಾಲ್ಮೀಕಿ ನಾಯಕ ಮಹಾಸಭಾ ಒತ್ತಾಯ

19012021 Devadurga protest
Published on

ಗ್ರೇಡ್-2 ತಹಸೀಲ್ದಾರ್ ಚಾಪಲ್‌ಗೆ ಮನವಿ ಸಲ್ಲಿಕೆ

ದೇವದುರ್ಗ: ಅಯೋಧ್ಯೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಮಮಂದಿರ ದೇವಸ್ಥಾನದ ಆವರಣದಲ್ಲೇ ಮಹರ್ಷಿ ವಾಲ್ಮೀಕಿ ಮಂದಿರವನ್ನು ನಿರ್ಮಿಸಲು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಘಟಕ ಒತ್ತಾಯಿಸಿದೆ.

ಗ್ರೇಡ್-2 ತಹಸೀಲ್ದಾರ್ ಶ್ರೀನಿವಾಸ್ ಚಾಪಲ್‌ಗೆ ಸೋಮವಾರ ಮನವಿ ಸಲ್ಲಿಸಿತು. ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಆ.5ರಂದು ಶಂಕುಸ್ಧಾಪನೆ ಕಾರ್ಯ ಕೈಗೊಂಡಿದ್ದು ಸ್ವಾಗತಾರ್ಹ. ಆದರೆ, ರಾಮಾಯಣ ಮಹಾಗ್ರಂಥವನ್ನು ಬರೆದು ಶ್ರೀರಾಮ ಹಾಗೂ ಸೀತಾಮಾತೆಯ ಜೀವನಚರಿತ್ರೆಯನ್ನು ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿಯವರಿಗೆ ಸಲ್ಲುತ್ತದೆ. ಅವರಿಗೆ ಗೌರವ ಸಲ್ಲಿಸಲು ಈ ಕ್ರಮ ಕೈಗೊಳ್ಳಬೇಕು. ಈ ಕುರಿತು ಸಂಸದ ರಾಜಾ ಅಮರೇಶ್ವರ ನಾಯಕ ಸರ್ಕಾರಕ್ಕೆ ಹಲವು ಸಲ ಮನವಿ ಸಲ್ಲಿಸಿದ್ದಾರೆ. ಸರ್ಕಾರ ಪ್ರತಿಕ್ರಿಯಿಸಿಲ್ಲ. ಕೇಂದ್ರ ಸರ್ಕಾರ ಹಾಗೂ ಟ್ರಸ್ಟ್ ಕೂಡಲೇ ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಂಡು ದೇಶದ ಜನರಿಗೆ ಮಾಹಿತಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸಂಘಟನೆ ತಾಲೂಕು ಅಧ್ಯಕ್ಷ ರಾಮಣ್ಣ ನಾಯಕ ಕರಡಿಗುಡ್ಡ, ಜೆಡಿಎಸ್ ನಾಯಕಿ ಕರೆಮ್ಮ ಜಿ.ನಾಯಕ, ಮುಖಂಡರಾದ ವಿ.ಎಂ.ಮೇಟಿ, ವೆಂಕಟೇಶ ಸೋಮಕಾರ, ಹನುಮೇಶ ನಾಯಕ, ಪಿಡ್ಡಯ್ಯ ನಾಯಕ, ಹನುಮಂತ್ರಾಯ ನಾಯಕ, ಮಹಾದೇವಪ್ಪ ವಕೀಲ ಕರಿಗುಡ್ಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net