ಸ್ವಚ್ಛತೆಯಿಂದ ಉತ್ತಮ ಆರೋಗ್ಯ, ಬಿಜೆಪಿ ರೈತ ಮೋರ್ಚಾ ಮಂಡಲ ಅಧ್ಯಕ್ಷ ಸಂಜೀವ್ ರೆಡ್ಡಿ ಸಾಹುಕಾರ ಅಭಿಮತ

280922 Jalahalli Pushkarani Cleaning
ದೇವದುರ್ಗ ತಾಲೂಕಿನ ಜಾಲಹಳ್ಳಿಯ ಯಲ್ಲಮ್ಮ ದೇವಸ್ಥಾನದ ಪುಷ್ಕರಣಿಯನ್ನು ಬಿಜೆಪಿ ರೈತ ಮೋರ್ಚಾದಿಂದ ಬುಧವಾರ ಸ್ವಚ್ಛಗೊಳಿಸಲಾಯಿತು.
Published on

ದೇವದುರ್ಗ: ಸ್ವಚ್ಛತೆಯಿಂದ ಆರೋಗ್ಯ ಕಾಪಾಡಲು ಸಾಧ್ಯ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಯೋಜನೆ ಮೂಲಕ ವೈಯಕ್ತಿಕ ಶೌಚಗೃಹ ನಿರ್ಮಿಸಿ ದಾಖಲೆ ಮಾಡಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ಮಂಡಲ ಅಧ್ಯಕ್ಷ ಸಂಜೀವ್ ರೆಡ್ಡಿ ಸಾಹುಕಾರ ಹೇಳಿದರು.

ಜಾಲಹಳ್ಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ನಿಮಿತ್ತ ಸೇವಾ ಪಾಕ್ಷಿಕ ಸ್ವಚ್ಛತಾ ಅಭಿಯಾನ ಅಂಗವಾಗಿ ರೈತ ಮೋರ್ಚಾದಿಂದ ಆಯೋಜಿಸಿದ್ದ ಯಲ್ಲಮ್ಮ ದೇವಸ್ಥಾನದ ಪುಷ್ಕರಣಿ ಸ್ವಚ್ಛತೆ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು. ರೈತ ಮೋರ್ಚಾದಿಂದ ವಿವಿಧ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು. ಪ್ರಧಾನ ಕಾರ್ಯದರ್ಶಿ ವಾಸುದೇವ ನಾಯಕ್, ಭೀಮನಗೌಡ ಕಕ್ಕಲದೊಡ್ಡಿ, ಶರಣಗೌಡ ಜಂಬಲದಿನ್ನಿ, ವೆಂಕೋಬ್ ಜಂಬಲದಿನ್ನಿ, ಸಿದ್ದರಾಮಯ್ಯರೆಡ್ಡಿ ಮ್ಯಾಕಲದೊಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net