ಸಿಎಂ ಭೇಟಿಯಾದ ಶಾಸಕ ಶಿವನಗೌಡ ನಾಯಕ

05-DVD-3A
Published on

ದೇವದುರ್ಗ: ತಾಲೂಕಿನ ಹಲವೆಡೆ 6 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿಪೂಜೆಗೆ ಪ್ರಧಾನಿ ನರೇಂದ್ರ ಮೋದಿರನ್ನು ಆಹ್ವಾನಿಸುವ ಸಂಬಂಧ ಶಾಸಕ ಕೆ.ಶಿವನಗೌಡ ನಾಯಕ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬುಧವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ತಾಲೂಕಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಕೆಲ ಕಾಮಗಾರಿಗಳ ಭೂಮಿಪೂಜೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲು ಮನವಿ ಮಾಡಿದರು. ನಾರಾಯಣಪುರ ಬಲದಂಡೆ ನಾಲೆ ಆಧುನೀಕರಣ ಹಾಗೂ ಉಪಕಾಲುವೆ ನವೀಕರಣ ಕಾಮಗಾರಿ ಪೂರ್ಣಗೊಂಡಿದೆ. ಪ್ರಧಾನ ಮಂತ್ರಿ ಜಲಜೀವನ ಯೋಜನೆ ಹಾಗೂ ರಾಜ್ಯ ಸರ್ಕಾರದ 3 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಹಲವು ಪೂರ್ಣ ಗೊಂಡಿವೆ. ಇನ್ನೂ ಕೆಲವಕ್ಕೆ ಭೂಮಿಪೂಜೆ ನೆರವೇರಿಸಬೇಕಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಕಚೇರಿಗೆ ಪತ್ರಬರೆದು ದಿನಾಂಕ ನಿಗದಿ ಮಾಡುವಂತೆ ಸಿಎಂಗೆ ಶಾಸಕ ಕೆ.ಶಿವನಗೌಡ ನಾಯಕ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net