ಸಂವಿಧಾನದಡಿ ಬದುಕು ಕಟ್ಟಿಕೊಳ್ಳುವ ಪ್ರತಿಜ್ಞೆ ಮಾಡಿ

Untitled design (3)
ಗಬ್ಬೂರಿನಲ್ಲಿ ಸಂವಿಧಾನ ಜಾಗೃತಿ ಜಾಥಾದಲ್ಲಿ ಮಹಾನ್ ವ್ಯಕ್ತಿಗಳ ವೇಷಧರಿಸಿ ವಿದ್ಯಾರ್ಥಿಗಳು ಗಮನ ಸೆಳೆದರು.
Published on

ದೇವದುರ್ಗ: ಸಾಮಾಜಿಕ ನ್ಯಾಯ, ಸರ್ವರಿಗೆ ಸಮಬಾಳು, ಸಮಪಾಲ ತತ್ವದಡಿ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚನೆ ಮಾಡಿದ್ದಾರೆ. ಪ್ರತಿಯೊಬ್ಬರೂ ಸಂವಿಧಾನದಡಿ ಬದುಕು ಕಟ್ಟಿಕೊಳ್ಳುವ ಪ್ರತಿಜ್ಞೆ ಮಾಡಬೇಕು ಎಂದು ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಹೇಳಿದರು.

ಸಂವಿಧಾನದಿಂದ ಸಾಮಾಜಿಕ ನ್ಯಾಯ

ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ತಾಪಂ ಹಾಗೂ ಗ್ರಾಪಂಯಿಂದ ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧಚಿತ್ರ ರಥಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬುಧವಾರ ಮಾತನಾಡಿದರು. ಯುವಕರು, ವಿದ್ಯಾರ್ಥಿಗಳು ಸಂವಿಧಾನ ಹಾಗೂ ಕಾನೂನಿನ ಬಗ್ಗೆ ಅಧ್ಯಯನ ಮಾಡಬೇಕು. ಕಾನೂನು ಬಲ್ಲವರು ಅಪರಾಧ ಮಾಡಲಾರರು ಎಂದು ಹೇಳಿದರು.

ಇದಕ್ಕೂ ಮುನ್ನ ಗಬ್ಬೂರಿಗೆ ಆಗಮಿಸಿದ ಜಾಗೃತಿ ಜಾಥಾವನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು. ಸಂವಿಧಾನ ಪೀಠಿಕೆಯನ್ನು ಪ್ರತಿಜ್ಞಾವಿಧಿ ಬೋಧಿಸಲಾಯಿತು. ತಾಪಂ ಇಒ ಬಸವರಾಜ ಹಟ್ಟಿ, ಎಡಿ ಅಣ್ಣರಾವ್, ಬಿಇಒ ಎಚ್.ಸುಖದೇವ್, ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಗಬ್ಬೂರು ಠಾಣೆ ಪಿಎಸ್‌ಐ ಗಂಗಪ್ಪ ಬುರ್ಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net