ದೇವದುರ್ಗದಲ್ಲಿ ಕರೊನಾ ಲಸಿಕೆ ವಿತರಣೆ

17012021 Devadurga Corona Vaccine Distribution
Published on

ದೇವದುರ್ಗ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಶನಿವಾರ ಆಯೋಜಿಸಿದ್ದ ಕರೊನಾ ಲಸಿಕಾ ವಿತರಣೆ ಕಾರ್ಯಕ್ರಮಕ್ಕೆ ತಹಸೀಲ್ದಾರ್ ಮಧುರಾಜ್ ಯಾಳಗಿ ಚಾಲನೆ ನೀಡಿದರು.

ನಂತರ ಮಾತನಾಡಿ, ತಾಲೂಕಿನಲ್ಲಿ ಕರೊನಾ ಲಸಿಕೆಯನ್ನು ಪ್ರಥಮವಾಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನೀಡಲಾಗಿದೆ. ತಾಲೂಕಿನಲ್ಲಿ ಮೊದಲ ಹಂತದಲ್ಲಿ 89 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಇದರಲ್ಲಿ 8ಜನ ಸಾರ್ವಜನಿಕ ಆಸ್ಪತ್ರೆ ವೈದ್ಯರು, 70 ಜನ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಇತರೆ ಇಲಾಖೆ ಕರೊನಾ ಸೇನಾನಿಗಳಿಗೆ ಲಸಿಕೆ ಹಾಕಲಾಗುವುದು ಎಂದರು.

ತಾಲೂಕು ವೈದ್ಯಾಧಿಕಾರಿ ಬನದೇಶ್ವರ, ಜಾಲಹಳ್ಳಿ ಸಾರ್ವಜನಿಕ ಆಸ್ಪತ್ರೆ ವೈದ್ಯಾದಿಕಾರಿ ಹುಲಿಮನಿ, ಅಯ್ಯಣ್ಣ, ಹಸನ ಅಂಜಳ, ಸಿಡಿಪಿ ವೆಂಕಟಪ್ಪ, ಸಿಪಿಐ ಆರ್.ಎಂ.ನದಾಫ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net