ಡೆಂಘೆ ಜ್ವರದ ಬಗ್ಗೆ ನಿರ್ಲಕ್ಷ್ಯ ಸಲ್ಲ: ಟಿಎಚ್‌ಒ ಬನದೇಶ್ವರ ಎಚ್ಚರಿಕೆ

DEVADURGA AWARENESS PROGRAM
ದೇವದುರ್ಗ ತಾಪಂ ಕಚೇರಿ ಮುಂದೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಡೆಂಘೆ ಜಾಗೃತಿ ಜಾಥಾ ನಡೆಸಲಾಯಿತು. ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಟಿಎಚ್‌ಒ ಡಾ.ಬನದೇಶ್ವರ, ತಾಪಂ ಇಒ ಬಸವರಾಜ ಹಟ್ಟಿ, ಎಡಿ ಅಣ್ಣರಾವ್, ಗೀತಾ, ಶಿವಪ್ಪ ಇತರರಿದ್ದರು.
Published on

ದೇವದುರ್ಗ: ಈಡೀಸ್ ಎನ್ನುವ ಸೊಳ್ಳೆ ಕಡಿತದಿಂದ ಡೆಂಘೆ ಜ್ವರ ಹರಡುತ್ತಿದ್ದು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ರೋಗಲಕ್ಷಣ ಕಂಡು ಬಂದರೆ ತಕ್ಷಣವೇ ಪರೀಕ್ಷೆ ಮಾಡಿ ಚಿಕಿತ್ಸೆ ಪಡೆಯಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಬನದೇಶ್ವರ ಹೇಳಿದರು.

ಪಟ್ಟಣದ ತಾಪಂ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ತಾಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ, ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪ್ಯಾರಾಮೆಡಿಕಲ್ ಕಾಲೇಜಿನಿಂದ ಆಯೋಜಿಸಿದ್ದ ಡೆಂಘೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು.

ರಾಜ್ಯದಲ್ಲಿ ಡೆಂಘೆ ಪ್ರಕರಣಗಳು ದಿನೇದಿನೆ ಹೆಚ್ಚಾಗಿ ಕಂಡುಬರುತ್ತಿವೆ. ಹೀಗಾಗಿ ಜ್ವರದ ಬಗ್ಗೆ ಎಚ್ಚರಿಕೆವಹಿಸಬೇಕಿದೆ. ರೋಗಲಕ್ಷಣಗಳು ಕಂಡು ಬಂದ ಕೂಡಲೆ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು. ಡೆಂಘೆ ಜ್ವರಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಲಕ್ಷಣದ ಮೇಲೆ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಜ್ವರದ ಬಗ್ಗೆ ಎಚ್ಚರಿಕೆವಹಿಸುವುದು ಅಗತ್ಯವಾಗಿದೆ ಎಂದರು.

ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ ಜಾಥಾಕ್ಕೆ ಚಾಲನೆ ನೀಡಿದರು. ಅಂಬೇಡ್ಕರ್ ವೃತ್ತ, ಮಹಾತ್ಮಗಾಂಧಿ ವೃತ್ತ, ಬಸವೇಶ್ವರ ಚೌಕ್, ಸಾರ್ವಜನಿಕ ಆಸ್ಪತ್ರೆ ರಸ್ತೆ, ಪೊಲೀಸ್ ಠಾಣೆ ರಸ್ತೆ ಮಾರ್ಗದ ಮೂಲಕ ಮಿನಿವಿಧಾನಸೌಧದವರೆಗೆ ಜಾಥಾ ಜರುಗಿತು. ತಾಪಂ ಇಒ ಬಸವರಾಜ ಹಟ್ಟಿ, ಮಾಧವನಂದ, ಪಿಐ ಅಶೋಕ ಸದಲಗಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ, ಶಿವಪ್ಪ ಭೂಮನಗುಂಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net