ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ.ಅನುದಾನ; ಶಾಸಕ ಕೆ.ಶಿವನಗೌಡ ನಾಯಕ ಹೇಳಿಕೆ

21112020 Devadurga K Shivanagowda Nayak
Published on

ದೇವದುರ್ಗ: ಗೂಗಲ್‌ಗೆ ಸಂಪರ್ಕ ಕಲ್ಪಿಸುವ ಸುಂಕೇಶ್ವರಹಾಳ ಮಾರ್ಗ ಸೇರಿ ಮೂರು ರಸ್ತೆಗಳ ಅಭಿವೃದ್ಧಿ ಹಾಗೂ ಈ ಭಾಗದ ಇತರೆ ಕಾಮಗಾರಿಗಳಿಗೆ ಸರ್ಕಾರದಿಂದ 500 ಕೋಟಿ ರೂ. ಪ್ಯಾಕೇಜ್ ತಂದು ಸಮಗ್ರ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ಕೆ.ಶಿವನಗೌಡ ನಾಯಕ ಹೇಳಿದರು.

ಗೋಪನದೇವರಹಳ್ಳಿಯಲ್ಲಿ ಶ್ರೀ ಆಂಜನೇಯ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದರು. ಲಾಕ್‌ಡೌನ್ ಹಿನ್ನೆಲೆಯಲ್ಲಿ ಈ ಭಾಗದ ರಸ್ತೆಗಳ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಈಗಾಗಲೇ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ವಿವಿಧ ಗ್ರಾಮಗಳಿಗೆ ಕುಡಿವ ನೀರು, ಸಿಸಿ ರಸ್ತೆ, ಶಾಲೆ, ಅಂಗನವಾಡಿ ಕಟ್ಟಡ ಸೇರಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ರಾಯಚೂರಿನ ಶ್ರೀ ಅಭಿನವ ರಾಚೋಟಿವೀರ ಸ್ವಾಮೀಜಿ, ಮಳಖೇಡದ ಕೋಟ್ಟಿರೇಶ್ವರ ಸ್ವಾಮೀಜಿ, ಶ್ರೀ ಬೆಟ್ಟದಯ್ಯ ತಾತ, ಸಾಬಯ್ಯತಾತ ಜಾಗಟಗಲ್, ವಿರೂಪಾಕ್ಷಯ್ಯ ತಾತ, ಮಲ್ಲಿಕಾರ್ಜುನಯ್ಯಸ್ವಾಮಿ, ಅಯ್ಯಪ್ಪಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net