ವರ್ಚುವಲ್ ಮೂಲಕ ಶಂಕುಸ್ಥಾಪನೆ; ನ್ಯಾಯಾಧೀಶ ಮಾರುತಿ ಬಗಾಡೆ ಹೇಳಿಕೆ

26112022 devadurga court site view
Published on

ದೇವದುರ್ಗದಲ್ಲಿ ನ್ಯಾಯಾಲಯ ಸ್ಥಳ ಪರಿಶೀಲನೆ

ದೇವದುರ್ಗ: ಪಟ್ಟಣದ ಹೊರವಲಯದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ನ್ಯಾಯಾಲಯದ ನಿವೇಶನವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಾರುತಿ ಬಗಾಡೆ ಗುರುವಾರ ವೀಕ್ಷಿಸಿದರು.

ಡಿ.10ರಂದು ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೇರವೇರಿಸುವ ಕುರಿತಾಗಿ ಚರ್ಚಿಸಿದರು. ರಾಯಚೂರಿನ ನೂತನ ನ್ಯಾಯಾಲಯ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಸಮಾರಂಭದಲ್ಲೇ ದೇವದುರ್ಗ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಕಾರ್ಯಕ್ರಮಕ್ಕೆ ಹೈಕೋಟ್ ಮುಖ್ಯ ನ್ಯಾಯಮೂರ್ತಿಯನ್ನು ಆಹ್ವಾನಿಸಲಾಗುವುದು ಎಂದರು. ಪಿಡಬ್ಲ್ಯುಡಿ ಎಇ ಚನ್ನಬಸ್ಸಪ್ಪ ಮೆಕಾಲೆ, ಎಇಇ ನುಸ್ರತ್‌ಅಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net