

ದೇವದುರ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು ಐದೂವರೆ ಕೋಟಿ ರೂ. ವೆಚ್ಚದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಭವನ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಸಂಸದ ಬಿ.ವೈ.ರಾಘವೇಂದ್ರ ಅನುದಾನ ನೀಡಿದ್ದು, ಆರು ಎಕರೆ ಜಾಗ ಮಂಜೂರು ಮಾಡಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರಿಂದ ಉದ್ಘಾಟಿಸಲಾಗುವುದು ಎಂದು ಶ್ರೀಶೈಲ ಪೀಠದ ಜಗದ್ಗುರು ಶ್ರೀ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.
ನವಿಲುಗುಡ್ಡ ಗ್ರಾಮದಲ್ಲಿ ಶ್ರೀಶೈಲ ಜಗದ್ಗುರುಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಶ್ರೀಕ್ಷೇತ್ರ ಯಡೂರದಿಂದ ಶ್ರೀಶೈಲವರೆಗೆ ಹಮ್ಮಿಕೊಂಡ ಜನಜಾಗೃತಿ ಪಾದಯಾತ್ರೆಯಲ್ಲಿ ಸೋಮವಾರ ಮಾತನಾಡಿದರು.
ಶಿವಮೊಗ್ಗದ ಅಪರೂಪದ ರಾಜಕಾರಣಿ ಬಿ.ಎಸ್.ಯಡಿಯೂರಪ್ಪ ಅವರು ಮಠ-ಮಾನ್ಯಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ. ವೀರಶೈವ ಲಿಂಗಾಯತ ಮಠಗಳಿಗೆ ಅವರು ಕೊಟ್ಟಂಥ ಕೊಡುಗೆ ಯಾವ ಮುಖ್ಯಮಂತ್ರಿಯೂ ಕೊಟ್ಟಿಲ್ಲ. ಇವರ ಸನ್ಮಾನರ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಸಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಎಲ್ಲ ಮಠಗಳಿಗೂ ಅನುದಾನ ನೀಡಿದ್ದಾರೆ
ಸಂಸದ ಬಿ.ವೈ.ರಾಘವೇಂದ್ರ, ಮುದ್ದೆಬಿಹಾಳ್ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ, ಶಾಸಕರಾದ ಕೆ.ಶಿವನಗೌಡ ನಾಯಕ, ಡಾ.ಶಿವರಾಜ ಪಾಟೀಲ್ ಇತರರಿದ್ದರು.