ಶಿಕ್ಷಣದಿಂದ ಸಮುದಾಯದ ಅಭಿವೃದ್ಧಿ, ಬಿಇಒ ಡಾ.ಆರ್.ಇಂದಿರಾ ಅಭಿಮತ

101022 Devadurga Maharshi Valmiki Jayanti
ದೇವದುರ್ಗ ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷ ಶರಣಗೌಡ ಬಕ್ರಿ ಭಾನುವಾರ ಉಧ್ಘಾಟಿಸಿದರು.
Published on


ದೇವದುರ್ಗ: ಯಾವುದೇ ಸಮುದಾಯ ಅಭಿವೃದ್ಧಿ ಹೊಂದಲು ಶಿಕ್ಷಣ ಪ್ರಮುಖ ಮಾರ್ಗವಾಗಿದೆ. ಈ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮುದಾಯದವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಬಿಇಒ ಡಾ.ಆರ್.ಇಂದಿರಾ ಹೇಳಿದರು.

ಪಟ್ಟಣದ ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು. ಶಿಕ್ಷಣ ಕಲಿಕೆಗೆ ನಾನಾ ಅವಕಾಶ ಹಾಗೂ ಸೌಲಭ್ಯಗಳಿವೆ. ಶಿಕ್ಷಣದಿಂದ ಏನನ್ನಾದರೂ ಸಾಧನೆ ಮಾಡಬಹುದು. ಯುವ ಜನತೆ ಸಾಧನೆಗೆ ಶಿಕ್ಷಣವನ್ನು ಅಸ್ತ್ರವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಸರಕಲ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸಿದ್ದಣ್ಣ ಪರಮೇಶ್ವರ ಉಪನ್ಯಾಸ ನೀಡಿ, ಮಹರ್ಷಿ ವಾಲ್ಮೀಕಿ ಅವರ ಆದರ್ಶ ತತ್ವಗಳು ಪ್ರತಿಯೊಬ್ಬರ ಜೀವನಕ್ಕೂ ಸ್ಫೂರ್ತಿದಾಯಕವಾಗಿವೆ. ಅವರು ರಚನೆ ಮಾಡಿರುವ ರಾಮಾಯಣ ಗ್ರಂಥದಲ್ಲಿ ಜೀವನದ ಮೌಲ್ಯಗಳು ಅಡಗಿವೆ. ಮಹಾನ್ ವ್ಯಕ್ತಿಗಳನ್ನು ಒಂದು ಸಮುದಾಯಕ್ಕೆ ಸೀಮಿತ ಮಾಡದೆ ಎಲ್ಲರೂ ಅವರು ತೋರಿದ ಸನ್ಮಾರ್ಗದಲ್ಲಿ ಮುನ್ನಡೆಯಬೇಕು ಎಂದರು.

ಪುರಸಭೆ ಅಧ್ಯಕ್ಷ ಶರಣಗೌಡ ಬಕ್ರಿ ಕಾರ್ಯಕ್ರಮ ಉದ್ಘಾಟಿಸಿದರು. ತಹಸೀಲ್ದಾರ್ ಶ್ರೀನಿವಾಸ ಚಾಪೇಲ್, ತಾಪಂ ಇಒ ಪಂಪಾಪತಿ ಹಿರೇಮಠ, ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ್, ಸಿಡಿಪಿಒ ವೆಂಕಟಪ್ಪ, ರಾಘವೇಂದ್ರರಾವ್, ಸಹಾಯಕ ಕೃಷಿ ನಿರ್ದೇಶಕ ಬಸವರಾಜ ಸಿದ್ದರೆಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net