ಪ್ರತಿ ಹಂತದಲ್ಲೂ ಮಹಿಳೆಯರ ಪಾತ್ರ ಪ್ರಮುಖ

090322 Devadurga Womens Day
ದೇವದುರ್ಗ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಉಡಿ ತುಂಬಲಾಯಿತು.
Published on

ದೇವದುರ್ಗ: ಪ್ರತಿಯೊಬ್ಬರ ಜೀವನದಲ್ಲಿ ಜನನದಿಂದ ಮರಣದವರೆಗೆ ಪ್ರತಿ ಹಂತದಲ್ಲೂ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಎರಡು ಕುಟುಂಬಗಳನ್ನು ಬೆಳಗುವ ಜೀವ ಹೆಣ್ಣು ಎಂದು ಟಿಎಚ್‌ಒ ಆರ್.ಎಸ್.ಹುಲಿಮನಿಗೌಡ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಮಹಿಳಾ ದಿನಾಚರಣೆ ಹಾಗೂ ಸೀಮಂತ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಿಳೆಯರನ್ನು ಪ್ರತಿಯೊಬ್ಬರೂ ಗೌರವದಿಂದ ಕಾಣಬೇಕಿದೆ. ಹಲವು ರಂಗಗಳಲ್ಲಿ ಮಹಿಳೆಯರು ಸಾಧನೆ ಮಾಡುವ ಮೂಲಕ ಸಬಲೆ ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದರು.

ಆರೋಗ್ಯಾಧಿಕಾರಿ ರಾಮಚಂದ್ರ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳನ್ನು ಗರ್ಭಿಣಿಯರಿಗೆ ತಲುಪಿಸಿ ಅವರ ಆರೋಗ್ಯ ಕಾಪಾಡುವುದು ಸೀಮಂತ ಕಾರ್ಯಕ್ರಮದ ಉದ್ದೇಶ. ಗರ್ಭಿಣಿ ಹಾಗೂ ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು. 40 ಗರ್ಭಿಣಿಯರಿಗೆ ಉಡಿ ತುಂಬಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net