ಮೃತ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡಿ

110222 Devadurga Karnataka State Building and Other Construction Workers' Federation
ದೇವದುರ್ಗದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ೆಡರೇಷನ್ ಶುಕ್ರವಾರ ಪ್ರತಿಭಟನಾ ರ‌್ಯಾಲಿ ನಡೆಸಿತು.
Published on

ದೇವದುರ್ಗ: ಕರೊನಾ ಸೋಂಕಿನಿಂದ ಮೃತಪಟ್ಟ ಕಟ್ಟಡ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ಕಾರ್ಮಿಕ ಇಲಾಖೆ ಕಚೇರಿ ಎದುರು ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ೆಡರೇಷನ್ ಗುರುವಾರ ಪ್ರತಿಭಟನೆ ನಡೆಸಿತು.

ಲಾಕ್‌ಡೌನ್ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಹಾಗೂ ಇತರ ಕಾರ್ಮಿಕರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಸೋಂಕಿನ ಭೀತಿ ಹಾಗೂ ಕೆಲಸವಿಲ್ಲದೆ ಜೀವನ ನಡೆಸುವುದು ದುಸ್ತರವಾಗಿತ್ತು. ಹಲವು ಕಾರ್ಮಿಕರು ಸೋಂಕಿನಿಂದ ಮೃತಪಟ್ಟಿದ್ದು, ಅವರ ಕುಟುಂಬ ತೀವ್ರ ಸಂಕಷ್ಟ ಎದುರಿಸುತ್ತಿವೆ. ಸೋಂಕಿತರ ವೈದ್ಯಕೀಯ ವೆಚ್ಚ ಭರಿಸಲು ಸಾಲ ಮಾಡಿದ್ದಾರೆ. ಆದರೆ, ಸರ್ಕಾರ ಪರಿಹಾರ ನೀಡುವಲ್ಲಿ ಮೀನಮೇಷ ಎಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್‌ನಿಂದ ಮೃತಪಟ್ಟ ನೋಂದಾಯಿತ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡಬೇಕು. ಸೋಂಕಿನಿಂದ ಗುಣ ಹೊಂದಿದವರ ವೈದ್ಯಕೀಯ ವೆಚ್ಚ ಭರಿಸಬೇಕು. ಕಾರ್ಮಿಕರ ಮಕ್ಕಳ ಮದುವೆ ಸಹಾಯಧನ ತ್ವರಿತವಾಗಿ ನೀಡಬೇಕು. ಅಸಹಜ ಮರಣ ಹೊಂದಿದವರಿಗೆ ನೀಡುವ 54 ಸಾವಿರ ರೂ. ಸಹಾಯಧನ 5 ಲಕ್ಷ ರೂ.ಗೆ ಹೆಚ್ಚಿಸಬೇಕು. ಅಪಘಾತದಲ್ಲಿ ಮೃತಪಟ್ಟವರಿಗೆ ನೀಡುವ 5 ಲಕ್ಷ ರೂ. ಪರಿಹಾರ 10 ಲಕ್ಷ ರೂ.ಗೆ ಹೆಚ್ಚಿಸಬೇಕು. ಕಾರ್ಮಿಕರ ಪತ್ನಿಯರ ಹೆರಿಗೆ ಭತ್ಯೆ ನೀಡಬೇಕು. ಸ್ವಂತ ಸೂರು ಕಟ್ಟಿಕೊಳ್ಳಲು 5 ಲಕ್ಷ ಸಹಾಯಧನ ನೀಡಬೇಕು. ಕಟ್ಟಡ ನಿರ್ಮಾಣ ಸಾಮಗ್ರಿಗಳ ಮೇಲಿನ ಜಿಎಸ್‌ಟಿ ಕಡಿಮೆ ಮಾಡಿ ಕಟ್ಟಡ ಸಂಬಂಧಿತ ಉದ್ಯಮ ರಕ್ಷಿಸಬೇಕೆಂದು ಒತ್ತಾಯಿಸಿದರು. ಕಾರ್ಮಿಕ ಅಧಿಕಾರಿ ಅಮರೇಶಗೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net