ಗ್ರಾಮೀಣ ಜನರ ಅಭಿವೃದ್ಧಿಗಾಗಿ ಕೆಲಸ

11122022 ganadal helth checkup camp
Published on

ದೇವದುರ್ಗ: ಗಾಣಧಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದೃಷ್ಟಿ ಆಸ್ಪತ್ರೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ ಶಿಬಿರವನ್ನು ಶನಿವಾರ ಆಯೋಜಿಸಲಾಗಿತ್ತು.

ವಕೀಲ ಬಸವರಾಜ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ ಮಾಡಿರುವುದು ಶ್ಲಾಘನೀಯ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮಗಳ ಅಭಿವೃದ್ಧಿಗಾಗಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಗ್ರಾಮೀಣ ಭಾಗದ ಜನರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಣ್ಣಿನ ಸಮಸ್ಯೆ ಇರುವ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕ ವಿತರಣೆ ಮಾಡಲಾಯಿತು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಗುರುಲಿಂಗಮ್ಮ, ನಾಗರಾಜ್, ಸೇವಾಪ್ರತಿನಿಧಿ ಬಸಲಿಂಗಮ್ಮ, ಮಹಮ್ಮದ್ ರಫಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net