ಮದ್ಯ ಅಕ್ರಮ ಮಾರಾಟ ತಡೆಗೆ ಬಾಗೂರು ಗ್ರಾಮದ ಮಹಿಳೆಯರ ಒತ್ತಾಯ

07062020 Devadurga Womens Protest
Published on

ದೇವದುರ್ಗ: ತಾಲೂಕಿನ ಬಾಗೂರು ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ತಡೆಯುವಂತೆ ಒತ್ತಾಯಿಸಿ ಜಾಲಹಳ್ಳಿ ಠಾಣೆ ಮುಂದೆ ಗ್ರಾಮದ ಮಹಿಳೆಯರು ಶನಿವಾರ ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಕಳೆದ ಆರು ತಿಂಗಳಿನಿಂದ ಮದ್ಯ ಅಕ್ರಮ ಮಾರಾಟ ದಂಧೆ ಮಿತಿಮೀರಿದ್ದು, ದಿನೇದಿನೆ ಕುಡುಕರ ಹಾವಳಿ ಹೆಚ್ಚಾಗಿದೆ. ಇದರಿಂದ ಕುಟುಂಬಗಳು ಬೀದಿಗೆ ಬೀಳುತ್ತಿದ್ದು, ಮಹಿಳೆಯರು ಸಂಕಷ್ಟ ಎದುರಿಸುತ್ತಿದ್ದಾರೆ. ಮದ್ಯ ವೆಸನಿಗಳು ಸಾರ್ವಜನಿಕರಿಗೆ ತೊಂದರೆ ನೀಡುವುದಲ್ಲದೇ ಕುಟುಂಬದ ಸದಸ್ಯರಿಗೆ ಹೊಡೆಯುವುದು, ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಮದ್ಯ ಮಾರಾಟಕ್ಕೆ ಕೆಲ ಜನಪ್ರತಿನಿಧಿಗಳ ಕುಮ್ಮಕು ಇರುವ ಕಾರಣ ಈ ಬಗ್ಗೆ ದೂರು ನೀಡಿದರೂ ಮದ್ಯ ಮಾರಾಟ ನಿಂತಿಲ್ಲ ಎಂದು ಆರೋಪಿಸಿದರು.

ಕೂಡಲೇ ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ತಡೆಯಬೇಕು. ಮದ್ಯ ಮಾರಾಟ ಮಾಡುವ ವ್ಯಾಪಾರಿಗಳು ಹಾಗೂ ಅವರಿಗೆ ಪ್ರೋತ್ಸಾಹಿಸುವ ಜನಪ್ರತಿನಿಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮಹಿಳೆಯರು ಒತ್ತಾಯಿಸಿದರು. 20ಕ್ಕೂ ಹೆಚ್ಚು ಮಹಿಳೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net