ಕುಡಿವ ನೀರಿಗಾಗಿ ಅಧಿಕಾರಿಗೆ ದಿಗ್ಬಂಧನ; ಜಾಲಹಳ್ಳಿ ಗ್ರಾಪಂ ಸದಸ್ಯರ ಆಕ್ರೋಶ

29012022 Devadurga pachayat members protest
Published on


ದೇವದುರ್ಗ: ಜಾಲಹಳ್ಳಿಯಲ್ಲಿ ಗ್ರಾಪಂ ಸಿಬ್ಬಂದಿ ಧರಣಿ ನಡೆಸುತ್ತಿರುವುದರಿಂದ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ಎದುರಾಗಿದೆ. ಪಂಚಾಯಿತಿಗೆ ಭೇಟಿ ನೀಡಿದ್ದ ತಾಪಂ ಸಹಾಯಕ ನಿರ್ದೇಶಕ ಅಣ್ಣರಾವ್‌ಗೆ ಗ್ರಾಪಂ ಸದಸ್ಯರು ದಿಗ್ಬಂಧನ ಹಾಕುವ ಮೂಲಕ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಪಂ ನೌಕರರು 23 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ಮೂರು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಕುಡಿವ ನೀರಿನ ಸಮಸೆಯಾಗಿದೆ. ನೌಕರರ ಸಮಸ್ಯೆ ಆಲಿಸಿ ಪರಿಹರಿಸಬೇಕಾದ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಬ್ಬಂದಿ ವೇತನ ಬಾಕಿ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಲಾಗುವುದು ಎಂದು ಅಧಿಕಾರಿ ಅಣ್ಣಾರಾವ್ ಭರವಸೆ ನೀಡಿದ್ದರಿಂದ ಕಚೇರಿಯಿಂದ ಬಿಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net