ಮಹಿಳೆಯರಿಗಾಗಿ ವಿವಿಧ ಕಾನೂನುಗಳು ಜಾರಿ

Untitled design(16)
Published on

ದೇವದುರ್ಗ: ಮಹಿಳೆಯರ ಮತ್ತು ಮಕ್ಕಳ ಸಬಲೀಕರಣಕ್ಕಾಗಿ ಸಂವಿಧಾನದಲ್ಲಿ ಹಲವು ಕಾನೂನುಗಳಿದ್ದು ಅವುಗಳನ್ನು ಸದ್ಬಳಕೆ ಮಾಡಿಕೊಂಡು ದೌರ್ಜನ್ಯ ವಿರುದ್ಧ ಧ್ವನಿ ಎತ್ತಬೇಕು ಎಂದು ಜೆಎಂಎಫ್‌ಸಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಸುರೇಶ ಅಪ್ಪಣ್ಣ ಸವದಿ ಹೇಳಿದರು.

ತಾಲೂಕಿನ ಜಾಲಹಳ್ಳಿ ಗ್ರಾಪಂಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಂಗಳವಾರ ಮಾತನಾಡಿದರು. ಮಹಿಳೆಯರ ಏಳಿಗೆಗಾಗಿ ಮತ್ತು ಅವರನ್ನು ಸಬಲರನ್ನಾಗಿಸಲು ವಿವಿಧ ಕಾನೂನು ಜಾರಿಗೊಳಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳು ಶಿಕ್ಷಣವಂತರಾಗಿ ಸಮಾಜದಲ್ಲಿ ಮುಂದೆ ಬರಬೇಕು. ಕಾನೂನು ಸೇವಾ ಸಮಿತಿ ನ್ಯಾಯಕೊಡಲು ಸದಾ ಸಿದ್ಧವಿರುತ್ತದೆ ಎಂದರು.

ಸಿವಿಲ್ ನ್ಯಾಯಾಧೀಶ ರಫೀಕ್ ಅಹ್ಮದ್ ಮಾತನಾಡಿ, ದೇಶದಲ್ಲಿ ಸಂವಿಧಾನದ ಆಶಯದಂತೆ ಹಲವು ಮಹಿಳಾ ಮತ್ತು ಮಕ್ಕಳ ರಕ್ಷಣಾತ್ಮಕ ಕಾನೂನುಗಳು ರೂಪುಗೊಂಡಿವೆ. ಮಕ್ಕಳ ರಕ್ಷಣೆಗಾಗಿ ಪೋಕ್ಸೋ, ಮಹಿಳೆಯರ ಸಬಲೀಕರಣಕ್ಕಾಗಿ ಜೀವನಾಂಶ, ಆಸ್ತಿಯಲ್ಲಿ ಹಕ್ಕು, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಸೇರಿ ಹಲವು ಕಾನೂನುಗಳಿವೆ ಎಂದರು.

ವಕೀಲರ ಸಂಘದ ತಾಲೂಕು ಅಧ್ಯಕ್ಷ ಮಹ್ಮದ್ ಜಾಕೀರ್ ಹುಸೇನ್, ವಕೀಲರಾದ ರವಿಕುಮಾರ ಪಾಟೀಲ್ ಅಳ್ಳುಂಡಿ, ರಂಗಪ್ಪ ಹೆದ್ದಾರೆ, ವೇಣುಗೋಪಾಲಗೌಡ ಪಾಟೀಲ್ ಜಾಲಹಳ್ಳಿ, ಪ್ಯಾನೆಲ್ ವಕೀಲರಾದ ನರಸಪ್ಪ ಚಿಂಚೋಡಿ, ಗಂಗಮ್ಮ, ಎಚ್.ಮೀನಪ್ಪರಾವ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net