ಗುಣಮಟ್ಟದ ಕಾಮಗಾರಿ ನಿರ್ವಹಿಸಿ, ಜಯ ಕರ್ನಾಟಕ ಸಂಘಟನೆ ಒತ್ತಾಯ

MANAVI
ದೇವದುರ್ಗದಲ್ಲಿ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿಗೆ ಜಯ ಕರ್ನಾಟಕ ಸಂಘಟನೆ, ಡಾ.ಅಂಬೇಡ್ಕರ್ ಯುವಕ ಸಂಘ ಜಂಟಿಯಾಗಿ ಮನವಿ ಸಲ್ಲಿಸಿದವು. ಗ್ರಾಮ ಘಟಕದ ಅಧ್ಯಕ್ಷ ಬಸವರಾಜ ನಾಯಕ, ಮುಖಂಡರಾದ ಚಂದಹುಸೇನ್, ಮುದುಕಪ್ಪ ಭೋವಿ ಇದ್ದರು.
Published on

ದೇವದುರ್ಗ: ಮುಷ್ಟೂರು ಗ್ರಾಮದಲ್ಲಿ ಕೈಗೊಂಡಿರುವ ಮುಖ್ಯರಸ್ತೆ ಹಾಗೂ ಒಳಚರಂಡಿ ಕಾಮಗಾರಿ ಕಳಪೆಯಿಂದ ಕೂಡಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಗುತ್ತಿಗೆದಾರರಿಗೆ ಸೂಚಿಸುವಂತೆ ಒತ್ತಾಯಿಸಿ ಜಯಕರ್ನಾಟಕ ಸಂಘಟನೆ ಮುಷ್ಟೂರು ಗ್ರಾಮ ಘಟಕ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ಜಂಟಿಯಾಗಿ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿಗೆ ಮನವಿ ಸಲ್ಲಿಸಿದವು.

ಗ್ರಾಮದಲ್ಲಿ ಮುಖ್ಯರಸ್ತೆ ಅಭಿವೃದ್ಧಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ರಸ್ತೆ ವಿಸ್ತರಣೆ ಮಾಡದೆ ಪ್ರಭಾವಿಗಳ ಒತ್ತಡಕ್ಕೆ ಗುತ್ತಿಗೆದರರು ಹಾಗೂ ಅಧಿಕಾರಿಗಳು ಮಣೆ ಹಾಕಿ ಬೇಕಾಬಿಟ್ಟಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವೈಜ್ಞಾನಿಕ ಹಾಗೂ ಅರೆಬರೆ ಕಾಮಗಾರಿಯಿಂದ ಜನರ ಓಡಾಟ ಹಾಗೂ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂದು ದೂರಿದರು.

ಕೂಡಲೇ ಸ್ಥಳ ಪರಿಶೀಲಿಸಿ ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಗುತ್ತಿಗೆದಾರರು ಹಾಗೂ ಜೆಇಗೆ ಸೂಚನೆ ನೀಡಬೇಕು. ರಸ್ತೆ ವಿಸ್ತರಣೆ ಮಾಡಿ ಅಭಿವೃದ್ಧಿ ಮಾಡಬೇಕು ಎಂದು ಒತ್ತಾಯಿಸಿದರು. ಗ್ರಾಮ ಘಟಕದ ಅಧ್ಯಕ್ಷ ಬಸವರಾಜ ನಾಯಕ, ಯುವಕರ ಸಂಘದ ಅಧ್ಯಕ್ಷ ಜಿ.ಮೌನೇಶ, ಮುಖಂಡರಾದ ತಿಪ್ಪಣ್ಣ, ವೆಂಕಟೇಶ, ಮುದಕಪ್ಪ ಭೋವಿ, ಚಂದಹುಸೇನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net