ಶೋಷಿತರ ಏಳ್ಗೆಗಾಗಿ ಜನಪರ ಯೋಜನೆ ಜಾರಿ

10072020 Devadurga office bearers programe
Published on

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯರಾಜೇಶ್ವರಿ ಗೋಪಶೆಟ್ಟಿ ಹೇಳಿಕೆ

ದೇವದುರ್ಗ: ಶಾಸಕ ಕೆ.ಶಿವನಗೌಡ ನಾಯಕರ ಅವಿರತ ಪರಿಶ್ರಮದಿಂದ ದೇವದುರ್ಗ ವಿಧಾನಸಭಾ ಕ್ಷೇತ್ರ ಮಾದರಿ ಕ್ಷೇತ್ರವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಅಧ್ಯಕ್ಷೆ ವಿಜಯರಾಜೇಶ್ವರಿ ಗೋಪಶೆಟ್ಟಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಬಿಜೆಪಿ ನಗರ ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರಗಳು ನೊಂದವರು, ಶೋಷಿತರ ಏಳ್ಗೆಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ. ಅವುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಎಲ್ಲ ಹಂತದ ಪದಾಧಿಕಾರಿಗಳು ಮಾಡಬೇಕು. ಜಗತ್ತು ಕರೊನಾ ಭೀತಿಯಿಂದ ತತ್ತರಿಸುತ್ತಿದ್ದು, ನಮ್ಮಿಂದಾದಷ್ಟು ಸಹಾಯ ಮಾಡಬೇಕು. ಸರ್ಕಾರ ಸೂಚಿಸುವ ನಿಯಮಗಳನ್ನು ಪಾಲಿಸೋಣ ಎಂದರು.

ಈ ಸಂದರ್ಭ ನವರತ್ನಾರನ್ನು ನಗರ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಸನ್ಮಾನಿಸಲಾಯಿತು. ಮಹಿಳಾ ಪ್ರತಿನಿಧಿಗಳಾದ ಕಲ್ಪನಾ, ಗದ್ಗಿ ಸೂಗಮ್ಮ, ಲಕ್ಷ್ಮೀ, ವಿಜಯಲಕ್ಷ್ಮೀ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net