ದೇವದುರ್ಗ ಪಟ್ಟಣ ನಗರಸಭೆಯಾಗಿ ಮೇಲ್ದರ್ಜೆಗೇರಿಸಿ

02122022 devadurga bhanuprakash
Published on

ದೇವದುರ್ಗ: ಪಟ್ಟಣದ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯ ಕಲ್ಪಿಸಲು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ಶಾಸಕ ಕೆ.ಶಿವನಗೌಡ ನಾಯಕಗೆ ದೇವದುರ್ಗ ನಾಗರಿಕ ವೇದಿಕೆ ಅಧ್ಯಕ್ಷ ಭಾನುಪ್ರಕಾಶ ಖೇಣೇದ್ ಪತ್ರ ಬರೆದಿದ್ದಾರೆ.

ಪಟ್ಟಣ ದಿನೇ ದಿನೆ ಅಭಿವೃದ್ಧಿ ಹೊಂದುತ್ತಿದ್ದು, ಜನಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈಗಿರುವ ಜನಸಂಖ್ಯೆಗೆ ಅನುಗುಣವಾಗಿ ಪುರಸಭೆಯಿಂದ ಸಮರ್ಪಕ ಸೌಲಭ್ಯ ಕಲ್ಪಿಸುವುದು ಕಷ್ಟ. ವರ್ತಕರು ಹಾಗೂ ಉದ್ಯಮಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಹೀಗಾಗಿ ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿದರೆ ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಬಹುದು. ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ವೇಗ ಸಿಗಲಿದೆ. ರಾಯಚೂರಿನಲ್ಲಿ ಏಮ್ಸ್ ಆರಂಭಿಸಲು ಸರ್ಕಾರದ ಬಳಿಗೆ ಪಕ್ಷಾತೀತವಾಗಿ ನಿಯೋಗ ಕೊಂಡೊಯ್ದರೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net