ದೇವದುರ್ಗ ನಗರಸಭೆಯಾಗಿ ಮೇಲ್ದರ್ಜೆಗೆ

170522 Devadurga Purasabe Meeting
ದೇವದುರ್ಗ ಪುರಸಭೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನೌಕರರ ನೇಮಕ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.
Published on

ದೇವದುರ್ಗ: ಪಟ್ಟಣ ದಿನೇದಿನೆ ಬೆಳೆಯುತ್ತಿರುವ ಕಾರಣ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಅಧ್ಯಕ್ಷ ಶರಣಗೌಡ ಗೌರಂಪೇಟೆ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ತುರ್ತು ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ಪಡೆಯಲಾಯಿತು.

ಅಧ್ಯಕ್ಷ ಶರಣಗೌಡ ಗೌರಂಪೇಟೆ ಮಾತನಾಡಿ, ಪಟ್ಟಣ ವೇಗವಾಗಿ ಬೆಳೆಯುತ್ತಿದ್ದು, ಜನಸಂಖ್ಯೆ ಕೂಡ ಹೆಚ್ಚುತ್ತಿದೆ. ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಈಗಿರುವ ಆದಾಯ ಸಾಲುತ್ತಿಲ್ಲ. ನಗರಸಭೆಯಾಗಿ ಮೇಲ್ದರ್ಜೆಗೇರಿಸಿದರೆ ತೆರಿಗೆ ಹೆಚ್ಚಳ ಜತೆಗೆ ಸರ್ಕಾರದಿಂದ ಹೆಚ್ಚಿನ ಅನುದಾನ ಬರಲಿದ್ದು, ಸಭೆಯಲ್ಲಿ ನಿರ್ಣಯ ಪಾಸ್‌ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net