ಕಾನೂನು ಬಾಹಿರ ಚಟುವಟಿಕೆಗೆ ಕಡಿವಾಣ ಅಗತ್ಯ

BV Nayak
Published on

ದೇವದುರ್ಗ: ತಾಲೂಕಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಮಿತಿಮೀರಿದ್ದು, ಇವುಗಳಿಗೆ ಕಡಿವಾಣ ಹಾಕಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಜನರ ನೆಮ್ಮದಿ ಜೀವನ ಹಾಗೂ ದೇವದುರ್ಗದ ಶಾಂತಿಗಾಗಿ ಜನರು ಕಾಂಗ್ರೆಸನ್ನು ಬೆಂಬಲಿಸಬೇಕು ಎಂದು ಡಿಸಿಸಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಬಿ.ವಿ.ನಾಯಕ ಹೇಳಿದರು.

ತಾಲೂಕಿನ ಚಿಂಚೋಡಿ, ಕರಿಗುಡ್ಡ, ಅಮರಾಪುರ, ನಾಗಡದಿನ್ನಿ ಗ್ರಾಮದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದರು. ತಾಲೂಕಿನಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಅವ್ಯವಹಾರ, ಭ್ರಷ್ಟಾಚಾರ, ಅಕ್ರಮ ಚಟುವಟಿಕೆಗಳು ಮಾಡುವ ಮೂಲಕ ಬಿಜೆಪಿ ಶಾಸಕರು ದುರಾಡಳಿತ ಮಾಡುತ್ತಿದೆ. ರಾಜ್ಯ ಹಾಗೂ ದೇಶದಲ್ಲಿ ಬಿಜೆಪಿ ಪಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ರಾಜಕಾರಣ ಮಾಡುತ್ತಿದ್ದು, ರಾಜಕೀಯವನ್ನು ವ್ಯಾಪಾರಿಕರಣ ಮಾಡಿಕೊಂಡಿದೆ. ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿಗೆ ನೇರ ಪೈಪೋಟಿ ಕೊಡುವುದು ಕಾಂಗ್ರೆಸ್ ಮಾತ್ರ. ಸ್ವಾರ್ಥದ ರಾಜಕಾರಣ ಮಾಡುವವರಿಗೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net