ಶುದ್ಧ ಕುಡಿವ ನೀರಿನ ಘಟಕ ಶೀಘ್ರ ಆರಂಭ

Honnatagi
ದೇವದುರ್ಗ ತಾಲೂಕು ಹೊನ್ನಟಗಿ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ್ದ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ದೇವರಾಜ್ ಬಿಂಗಂ ಆರ್‌ಒ ಪ್ಲಾಂಟ್ ಕಾಮಗಾರಿ ಪರಿಶೀಲಿಸಿದರು.
Published on

ದೇವದುರ್ಗ: ಬೇಸಿಗೆ ಹಿನ್ನೆಲೆಯಲ್ಲಿ ಕುಡಿವ ನೀರಿಗೆ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗಿದ್ದು, ಹೊನ್ನಟಗಿ ಗ್ರಾಮದಲ್ಲಿ ಆರ್‌ಒ ಪ್ಲಾಂಟ್ ಶೀಘ್ರ ಸ್ಥಾಪಿಸಿ ಜನರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ದೇವರಾಜ್ ಬಿಂಗಂ ಹೇಳಿದರು.

ಹೊನ್ನಟಗಿ ಗ್ರಾಮದಲ್ಲಿ ಮೂಲಸೌಲಭ್ಯ ಕಲ್ಪಿಸದಿದ್ದರೆ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದರಿಂದ ಗ್ರಾಮಕ್ಕೆ ಭೇಟಿ ನೀಡಿ ಕುಡಿವ ನೀರಿನ ವ್ಯವಸ್ಥೆ ಪರಿಶೀಲಿಸಿ ಶುಕ್ರವಾರ ಮಾತನಾಡಿದರು. ಕುಡಿವ ನೀರಿನ ಘಟಕ ನಿರ್ಮಾಣಕ್ಕೆ 40 ಲಕ್ಷ ರೂ. ಮಂಜೂರಾಗಿದ್ದು, 11ಲಕ್ಷ ರೂ. ಬಿಡುಗಡೆಯಾಗಿದೆ. ಈಗಾಗಲೇ ಪ್ಲಾಂಟ್ ನಿರ್ಮಿಸಿದ್ದು, ಮೂರು ಬೋರ್‌ವೆಲ್, ಐದು ಸೋಲಾರ್ ಲೈಟ್ ಹಾಕಲಾಗಿದೆ. ಎರಡನೇ ಹಂತದಲ್ಲಿ 6ಲಕ್ಷ ರೂ. ಬಿಡುಗಡೆಯಾಗಿದೆ. ಉಳಿದ 23ಲಕ್ಷ ರೂ. ಶೀಘ್ರ ಬಿಡುಗಡೆ ಮಾಡಲಾಗುವುದು. ಆರ್‌ಒ ಘಟಕ ಸ್ಥಾಪಿಸಿ ಪೈಪ್‌ಲೈನ್ ಮೂಲಕ ನೀರಿನ ಸೌಲಭ್ಯ ಕಲ್ಪಿಸಲಾಗುವುದು. 15 ದಿನಗಳಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net