ದೇವದುರ್ಗ ಪೊಲೀಸ್ ಠಾಣೆಯ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗಿದ ವ್ಯಕ್ತಿ ಬಂಧನ

Devadurga Mallesh Pujari Arrest
ದೇವದುರ್ಗ ಪೊಲೀಸ್ ಸಿಬ್ಬಂದಿ ಮೇಲೆ ದೌರ್ಜನ್ಯ ನಡೆಸಿದ್ದ ಮಲ್ಲೇಶ ಪೂಜಾರಿ.
Published on

ದೇವದುರ್ಗ: ಇಲ್ಲಿನ ಪೊಲೀಸ್ ಠಾಣೆಯ ಸಿಬ್ಬಂದಿ ಮೇಲೆ ದೌರ್ಜನ್ಯ ನಡೆಸಿದ ಮಲ್ಲೇಶ ಪೂಜಾರಿ ಎನ್ನುವ ವ್ಯಕ್ತಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿ ತನ್ನ ತಮ್ಮನ ಜತೆ ಮದ್ಯವ್ಯಸನಿಯಾಗಿ ಠಾಣೆಗೆ ಬಂದು, ಪೊಲೀಸರ ಮೇಲೆ ಜಗಳ ತೆಗೆದು ದೌರ್ಜನ್ಯ ನಡೆಸಿದ್ದನು. ಪೊಲೀಸರ ಮೇಲೆ ದೌರ್ಜನ್ಯ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ದಿಗ್ವಿಜಯ ನ್ಯೂಸ್ ಪೊಲೀಸ್ ಠಾಣೆಯಲ್ಲೇ ಪೊಲೀಸರಿಗೆ ಇಲ್ವಾ ರಕ್ಷಣೆ? ಎನ್ನುವ ಶೀರ್ಷಿಕೆಯಡಿ ವರದಿ ಬಿತ್ತರಿಸಿ ದೌರ್ಜನ್ಯ ಮೇಲೆ ಬೆಳಕು ಚಲ್ಲಿತ್ತು. ಈ ಸುದ್ದಿ ಎಲ್ಲೆಡೆ ವೈರಲ್ ಆಗಿತ್ತು.

ಇದರಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಮೇಲಧಿಕಾರಿಗಳು ಆರೋಪಿ ವಿರುದ್ಧ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲಿನ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಕರ್ತವ್ಯಕ್ಕೆ ಅಡ್ಡಿ ಕಾಯ್ದೆಯಡಿ (ಕಲಂ 353) ಪ್ರಕರಣ ದಾಖಲಿಸಿ, ಆರೋಪಿ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸಿಪಿಐ ಆರ್.ಎಂ.ನದಾಫ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net