ದೇವದುರ್ಗ ಗ್ರಾಮೀಣ: ತಾಲೂಕಿನ ವೀರಗೋಟ ಗ್ರಾಮದ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕ, ನೀರಿನ ಸೆಳೆತಕ್ಕೆ ಸಿಲುಕಿ ಗುರುವಾರ ಮೃತಪಟ್ಟಿದ್ದಾನೆ. ಜಾಲಹಳ್ಳಿ ಗ್ರಾಮದ ನಿವಾಸಿ ಪ್ರಕಾಶ ಬಡಿಗೇರ್ (24) ಮೃತ ಯುವಕ. ಮೂರು ತಿಂಗಳ ಹಿಂದಷ್ಟೇ ಇವರ ಮದುವೆಯಾಗಿತ್ತು.