ಶಾಲೆ ಅಭಿವೃದ್ಧಿಗೆ ಸಹಕಾರ ಅಗತ್ಯ

020123 Madalakal SDMC
ದೇವದುರ್ಗ ತಾಲೂಕು ಮಲದಕಲ್ ಶಾಲೆಗೆ ನೂತನ ಎಸ್ಡಿಎಂಸಿ ರಚಿಸಲಾಯಿತು.
Published on

ದೇವದುರ್ಗ: ಸರ್ಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಹಲವು ಯೋಜನೆ ಜಾರಿಗೆ ತಂದಿದೆ. ಇದರ ಜತೆಗೆ ಶಾಲಾಭಿವೃದ್ಧಿಗೆ ಸಮುದಾಯದ ಸಹಕಾರ ಬಹುಮುಖ್ಯ ಎಂದು ಮಲದಕಲ್ ಎಸ್ಡಿಎಂಸಿ ಅಧ್ಯಕ್ಷೆ ಸಂಗೀತಾ ಬಾಲಿಂಗ ದೊರೆ ಹೇಳಿದರು.

ಮಲದಕಲ್ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರಿಗೆ ಸಮುದಾಯದ ಸಹಭಾಗಿತ್ವ ಮುಖ್ಯ. ಪಾಲಕರು ಮಕ್ಕಳನ್ನು ತಪ್ಪದೇ ಶಾಲೆಗೆ ಕಳಿಸಬೇಕು. ಶಾಲೆಗೆ ಅಗತ್ಯವಿರುವ ಮೂಲಸೌಲಭ್ಯಗಳಿಗೆ ಗ್ರಾಪಂಗೆ ಸಹಕಾರ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net