

ಪುರಸಭೆ ನೈರ್ಮಲ್ಯ ಅಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ
ದೇವದುರ್ಗ: ಪುರಸಭೆ ಅಧಿಕಾರಿಗಳು ಪಟ್ಟಣದ ವಿವಿಧ ಅಂಗಡಿ, ಹೋಟೆಲ್ ಹಾಗೂ ವ್ಯಾಪಾರಿ ಮಳಿಗೆಗಳ ಮೇಲೆ ದಾಳಿ ನಡೆಸಿ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಪ್ಲಾಸ್ಟಿಕ್ ಬ್ಯಾಗ್ ಇತರ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡರು.
ನೈರ್ಮಲ್ಯ ಅಧಿಕಾರಿ ನರಸರೆಡ್ಡಿ ಮಾತನಾಡಿ, ಪುರಸಭೆಯಿಂದ ಪ್ಲಾಸ್ಟಿಕ್ ಮುಕ್ತ ಅಭಿಯಾನ ನಡೆಸಿ, ಪರಿಸರಕ್ಕೆ ಹಾನಿಯುಂಟು ಮಾಡುವ ಪ್ಲಾಸ್ಟಿಕ್ ಬಳಸದಂತೆ ಸಾರ್ವಜನಿಕರು ಹಾಗೂ ಕಿರಾಣಿ ಅಂಗಡಿ, ಹೋಟೆಲ್ ಇತರರ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತು. ಹೀಗಾದರೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಇನ್ನು ಮುಂದೆ ನಿಷೇಧಿತ ಪ್ಲಾಸ್ಟಿಕ್ ಮಾರಿದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಪೌರಕಾರ್ಮಿಕ ಸಿಬ್ಬಂದಿ ಬಸವರಾಜ್ ದಫೇದಾರ್, ಹುಲಿಗೆಪ್ಪ, ರಂಗಪ್ಪ, ಅನಿಲ್ ಕುಮಾರ್ ಇತರರಿದ್ದರು.