ಅಪೌಷ್ಟಿಕ ನಿವಾರಣೆಗೆ ಸಹಕಾರ ಅಗತ್ಯ

Devadurga Exploitation Campaign Program
ದೇವದುರ್ಗ ತಾಲೂಕು ಸುಣ್ಣದಕಲ್ ಗ್ರಾಮದಲ್ಲಿ ಆಯೋಜಿಸಿದ್ದ ಷೋಷಣಾ ಅಭಿಯಾನ ಕಾರ್ಯಕ್ರಮವನ್ನು ಸಿಡಿಪಿಒ ಮಾಧವಾನಂದ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ, ಎಸ್ಡಿಎಂಸಿ ಅಧ್ಯಕ್ಷ ರಾಘವೇಂದ್ರ, ಮುಖ್ಯಶಿಕ್ಷಕ ಸಿದ್ದಯ್ಯಸ್ವಾಮಿ, ಆರೋಗ್ಯ ಸಹಾಯಕಿ ಲಕ್ಷ್ಮೀ, ಮೇಲ್ವಿಚಾರಕಿ ಮಾನಮ್ಮ, ಗ್ರಾಪಂ ಸದಸ್ಯೆ ಸುಷ್ಮಾ, ಕಾರ್ಯಕರ್ತೆಯರಾದ ದುರುಗಮ್ಮ, ರೇಣುಕಾ ಭಜಂತ್ರಿ, ಲಕ್ಷ್ಮೀ ಕುಂಬಾರ ಇತರರಿದ್ದರು.
Published on

ದೇವದುರ್ಗ: ನಗರ ಪ್ರದೇಶ ಸೇರಿ ಗ್ರಾಮೀಣ ಭಾಗದಲ್ಲಿ ಮಕ್ಕಳು ಹಾಗೂ ಗರ್ಭಿಣಿಯರಲ್ಲಿ ಅಪೌಷ್ಟಿಕ ಹೆಚ್ಚಾಗಿ ಕಂಡುಬರುತ್ತಿದೆ. ಈ ರೋಗ ನಿರ್ಮೂಲನೆಗಾಗಿ ಸರ್ಕಾರ ವಿವಿಧ ಯೋಜನೆ ಜಾರಿಗೊಳಿಸಿದ್ದು ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಾಧವಾನಂದ ಹೇಳಿದರು.

ತಾಲೂಕಿನ ಸುಣ್ಣದಕಲ್ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಗ್ರಾಪಂನಿಂದ ಆಯೋಜಿಸಿದ್ದ ರಾಷ್ಟ್ರೀಯ ಪೋಷಣಾ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಬುಧವಾರ ಮಾತನಾಡಿದರು. ಗರ್ಭಿಣಿ ಹಾಗೂ ಬಾಣಂತಿಯರು ಹಾಗೂ ಶಿಶುಗಳು ಅಪೌಷ್ಟಿಕದಿಂದ ಉಂಟಾಗುವ ಮರಣ ತಗ್ಗಿಸಲು ಸರ್ಕಾರ ಪೋಷಣಾ ಅಭಿಯಾನ ಕಾರ್ಯಕ್ರಮ ಜಾರಿಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರು ಪ್ರತಿಗರ್ಭಿಣಿ ಹಾಗೂ ಬಾಣಂತಿಯರಿಗೆ ಪೋಷಕಾಂಶ ಇರುವ ಆಹಾರಧಾನ್ಯ ಕೊಡಬೇಕು. ಹಸಿ ತರಕಾರಿ, ಮೊಟ್ಟೆ ಸೇವಿಸುವಂತೆ ಅವರಿಗೆ ಜಾಗೃತಿ ಮೂಡಿಸಬೇಕು. ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕಾರ್ಯಕರ್ತೆಯರು ಶ್ರಮಿಸಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net