

ದೇವದುರ್ಗ: ಸುರಕ್ಷಿತ ಪ್ರಯಾಣಕ್ಕಾಗಿ ಆಟೋ ಚಾಲಕರು ಕಡ್ಡಾಯವಾಗಿ ಸಂಚಾರ ನಿಯಮ ಪಾಲನೆ ಮಾಡಬೇಕು ಎಂದು ಪಿಐ ಕೆ.ಹೊಸಕೇರಪ್ಪ ಹೇಳಿದರು.
ಪಟ್ಟಣದ ಸಾರ್ವಜನಿಕ ಕ್ಲಬ್ ಮೈದಾನಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಸಂಚಾರ ನಿಯಮ ಪಾಲನೆ ಹಾಗೂ ಜಾಗೃತಿ ಸಭೆಯಲ್ಲಿ ಬುಧವಾರ ಮಾತನಾಡಿದರು. ಚಾಲಕರು ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡಬಾರದು. ಪ್ರತಿಯೊಬ್ಬ ಚಾಲಕರು ಕಡ್ಡಾಯವಾಗಿ ಚಾಲನಾ ಪರವಾನಗಿ, ವಾಹನ ನೋಂದಣಿ ಹಾಗೂ ವಿಮೆ ದಾಖಲಾತಿ ಹೊಂದಿರಬೇಕು. ನಿಗದಿಗಿಂತ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರನ್ನು ಕರೆದೊಯ್ಯುವುದು ಅಪರಾಧ. ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು ಎಂದು ತಿಳಿಸಿದರು.