ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿ

devadurga voting campaign
Published on

ದೇವದುರ್ಗ: ಪ್ರತಿಯೊಬ್ಬ ಮತದಾರರು ತಪ್ಪದೆ ಮತದಾನ ಮಾಡಬೇಕು. ಸಂವಿಧಾನ ನಮಗೆ ಕೊಟ್ಟಿರುವ ಹಕ್ಕನ್ನು ಎಚ್ಚರಿಕೆಯಿಂದ ಚಲಾಯಿಸಬೇಕಾಗಿರುವುದು ನಮ್ಮ ಬದ್ಧತೆ ಹಾಗೂ ಕರ್ತವ್ಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬನದೇಶ್ವರ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು. 18ವರ್ಷ ತುಂಬಿದ ಪ್ರತಿಯೊಬ್ಬರಿಗೂ ಮತದಾನ ಮಾಡುವ ಹಕ್ಕು ಸಂವಿಧಾನ ಕಲ್ಪಿಸಿದೆ. ಜಾತಿ, ಧರ್ಮ, ಭಾಷೆ, ಪಂಥದ ಭೇದಗಳಿಲ್ಲದೆ ಪ್ರತಿಯೊಬ್ಬರಿಗೂ ಮತದಾನ ಮಾಡುವ ಹಕ್ಕಿದೆ ಎಂದರು.

ಮತದಾರರು ಜಾಗೃತರಾಗಬೇಕಿದ್ದು, ಯಾವುದೇ ಕಾರಣಕ್ಕೂ ಮಾತದಾನ ಪ್ರಕ್ರಿಯೆಯಿಂದ ಹಿಂದೆ ಸರಿಬಾರದು. ಸೂಕ್ತವಾದ ಅಭ್ಯರ್ಥಿಗೆ ಮತ ನೀಡುವ ಮೂಲಕ ಪ್ರಜ್ಞಾಪ್ರಭುತ್ವ ಗಟ್ಟಿಗೊಳಿಸಬೇಕು. ಆಮಿಷಗಳಿಗೆ ಒಳಗಾಗದೆ ನಿರ್ಭಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು.

ತಾಲೂಕು ಹಿರಿಯ ನಿರೀಕ್ಷಣಾಧಿಕಾರಿ ಡಾ.ಗಂಗಾಧರ್, ಚನ್ನಬಸಯ್ಯ ಹಿರೇಮಠ, ಎನ್‌ಆರ್‌ಎಲ್‌ಎಂ ಪ್ರದೀಪ್, ಮೇಲ್ವಿಚಾರಕಿ ಲತಾ, ಪ್ರಭು ಪೂಜಾರಿ ಐದಬಾವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net