

ಮಡಿಕೇರಿ:
1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕöÈತ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 60ನೇ ಪುಣ್ಯಸ್ಮರಣೆ ಮಡಿಕೇರಿಯಲ್ಲಿ ಭಾನುವಾರ ನಡೆಯಿತು. ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರು) ಹಾಗೂ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಟ್ರಸ್ಟ್ ಸಹಯೋಗದಲ್ಲಿ ಸ್ಕಾ÷್ವ.ಲೀ.ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ನಿವೃತ್ತ ಸೇನಾಧಿಕಾರಿಗಳು, ಯೋಧರು, ಜನಪ್ರತಿನಿಧಿಗಳು, ಕೊಡವ ಸಮಾಜದ ಪ್ರತಿನಿಧಿಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಪ್ರಮುಖರು ವೀರ ಸೇನಾನಿಗೆ ಗೌರವ ಅರ್ಪಿಸಿದರು.
ಈ ಸಂದರ್ಭ ಮಾತನಾಡಿದ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ, ದೇಶ ಹಾಗೂ ದೇಶದ ಪ್ರಜೆಗಳನ್ನು ರಕ್ಷಿಸುತ್ತಿರುವ ವೀರ ಯೋಧರನ್ನು ಸ್ಮರಿಸುವುದು ನಮ್ಮ ಜವಾಬ್ದಾರಿಯಾಗಿದೆ. ನಮ್ಮನ್ನು ದೇವರು ರಕ್ಷಿಸುತ್ತಾರೆ ಎಂದು ನಾವು ಸದಾ ದೇವರನ್ನು ಸ್ಮರಿಸುತ್ತೇವೆ. ನಮ್ಮನ್ನು ಸುರಕ್ಷಿತವಾಗಿಟ್ಟಿರುವ ಸೈನಿಕರು ಕೂಡ ದೇವರಿಗೆ ಸಮಾನರಾಗಿದ್ದು, ನಮಗಾಗಿ ಜೀವ ಕೊಟ್ಟ ಹುತಾತ್ಮರ ಸ್ಮರಣೆ ನಮ್ಮ ಕರ್ತವ್ಯವಾಗಿದೆ. ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ದೇಶದ ರಕ್ಷಣೆಗಾಗಿ ಹುತಾತ್ಮರಾಗುವ ಮೂಲಕ ಯುವ ಪೀಳಿಗೆಗೆ ಸ್ಫೂರ್ತಿಯಾಗಿದ್ದಾರೆೆ. ಇವರ ಆದರ್ಶವನ್ನು ಯುವ ಸಮೂಹ ಮೈಗೂಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯಕ್ಕೆ ಸೇರುವ ಮೂಲಕ ದೇಶ ಸೇವೆಗೆ ಮುಂದಾಗಬೇಕು ಎಂದರು.
ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಮಾತನಾಡಿ ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ವೀರಮರಣವನ್ನಪ್ಪಿದ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ದೇಶಪ್ರೇಮದಲ್ಲಿ ಎಲ್ಲರಿಗೂ ಮಾದರಿಯಾಗಿದ್ದಾರೆ. ತಮ್ಮ ಜೀವದ ಹಂಗನ್ನು ತೊರೆದು ಶತ್ರುಗಳೊಂದಿಗೆ ಹೋರಾಡಿ ದೇಶಪ್ರೇಮವನ್ನು ಮೆರೆದಿದ್ದಾರೆ ಎಂದು ಸ್ಮರಿಸಿದರು.
ನಿವೃತ್ತ ಸೇನಾಧಿಕಾರಿ ಬಾಳೆಯಡ ಮಂದಪ್ಪ ಮಾತನಾಡಿ, ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ತಮ್ಮ ಕುಟುಂಬದ ಬಗ್ಗೆ ಚಿಂತಿಸದೆ ದೇಶದ ರಕ್ಷಣೆಗಾಗಿ ಜೀವ ನೀಡಿದ್ದಾರೆ. ಮಹಾವೀರ ಚಕ್ರ ಪುರಸ್ಕೃತ ದೇವಯ್ಯ ಅವರ ತ್ಯಾಗ ಬಲಿದಾನ ಅವಿಸ್ಮರಣೀಯವಾಗಿದ್ದು, ಇವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ, ಸೈನಿಕರು ತಮ್ಮ ಜೀವದ ಹಂಗು ತೊರೆದು ದೇಶಸೇವೆಯಲ್ಲಿ ತೊಡಗಿರುವುದರಿಂದ ನಾವುಗಳು ಸುರಕ್ಷಿತರಾಗಿದ್ದೇವೆ. ಆದರೆ ದೇಶವನ್ನು ರಕ್ಷಿಸಿ ನಿವೃತ್ತರಾಗಿ ಬರುವ ಯೋಧರಿಗೆ ಇಂದು ಜೀವನ ಭದ್ರತೆ ಮತ್ತು ಗೌರವ ಇಲ್ಲದಾಗಿದೆ. ಸರ್ಕಾರ ನಿವೃತ್ತ ಯೋಧರ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು, ಯಾವುದೇ ಸಮಸ್ಯೆಗಳಿದ್ದರೂ ತಕ್ಷಣ ಸ್ಪಂದಿಸಿ ಪರಿಹರಿಸಬೇಕು. ಸರ್ಕಾರಿ ಕಚೇರಿಗಳಿಗೆ ಮಾಜಿ ಸೈನಿಕರನ್ನು ಅಲೆದಾಡಿಸಬಾರದು. ಆರೋಗ್ಯ ಸುರಕ್ಷತೆ, ಮೂಲಭೂತ ಸೌಲಭ್ಯ, ನಿವೇಶನ ಸೇರಿದಂತೆ ನಿವೃತ್ತ ಯೋಧರ ಬೇಡಿಕೆಗಳಿಗೆ ಸರಕಾರ ಮಾನ್ಯತೆ ನೀಡುವ ಮೂಲಕ ಜೀವನ ಭದ್ರತೆ ಒದಗಿಸಬೇಕು ಎಂದು ಹೇಳಿದರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಫೋರಂನ ಪ್ರಮುಖರಾದ ಉಳ್ಳಿಯಡ ಪೂವಯ್ಯ, ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು ಮಾತನಾಡಿದರು.
ಕೊಡವ ಮಕ್ಕಡ ಕೂಟದ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ, ನಿರ್ದೇಶಕಿ ತೆನ್ನಿರ ಟೀನಾ, ಸಲಹೆಗಾರರಾದ ಐಚಂಡ ರಶ್ಮಿ ಮೇದಪ್ಪ, ಅಜ್ಜಮಾಡ ಒಕ್ಕದ ಅಧ್ಯಕ್ಷ ಲವ ಕುಶಾಲಪ್ಪ, ಪ್ರಮುಖರಾದ ಅಜ್ಜಮಾಡ ಬೋಪಯ್ಯ, ಅಜ್ಜಮಾಡ ಚಂಗಪ್ಪ, ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷ ಕೇಕಡ ವಿಜು ದೇವಯ್ಯ ಮತ್ತಿತರರು ಇದ್ದರು.
ಇದೇ ಸಂದರ್ಭ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಫೋರಂ ನ ಅಧ್ಯಕ್ಷ ಕರ್ನಲ್ ಕಂಡ್ರತAಡ ಸುಬ್ಬಯ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮೌನಾಚರಣೆ ಮಾಡಲಾಯಿತು.