ಕುಂಜರಾಣಿ ವಿವಿಗೆ 9ನೇ ರ‌್ಯಾಂಕ್

DVM-20-1
Published on

ದೇವಣಗಾಂವ್: ಗ್ರಾಮದ ಕುಂಜರಾಣಿ ಅಮಸಿದ್ಧ ತೇಲಿ ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಎಸ್‌ಬಿ ಕಲಾ ಹಾಗೂ ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ 2018-19ನೇ ಸಾಲಿನ ಬಿಎಸ್ಸಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಶೇ.94.37 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ ಹಾಗೂ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ 9ನೇ ರ‌್ಯಾಂಕ್ ಗಳಿಸಿದ್ದಾರೆ. ವಿದ್ಯಾರ್ಥಿನಿ ಸಾಧನೆಗೆ ಪಾಲಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net