

ವಿಜಯವಾಣಿ ಸುದ್ದಿಜಾಲ ದೇವನಹಳ್ಳಿ
ವಿದ್ಯಾರ್ಥಿ ಜೀವನದಲ್ಲಿ ಶೈಕ್ಷಣಿಕ ಅಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಿಗುಣಟ್ಟಮದ ಶಿಕ್ಷಣ ಪಡೆದರೆ ಭವಿಷ್ಯ ಉತ್ತಮವಾಗಿರಲಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡೆ, ಎನ್‌ಸಿಸಿ, ಎನ್‌ಎಸ್‌ಎಸ್, ರೋವರ್ಸ್ ಮತ್ತು ರೇಂಜರ್ಸ್, ಯುವ ರೆಡ್‌ಕ್ರಾಸ್ ಹಾಗೂ ಇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಶ್ರದ್ಧಾ ಭಕ್ತಿಯಿಂದ ಅಭ್ಯಾಸ ಮಾಡುವ ಮೂಲಕ ಸಮಾಜದಲ್ಲಿ ಸತ್ಪ್ರಜೆಗಳಾಗಬೇಕು. ಗುರುಗಳ ಮೇಲೆ ಭಕ್ತಿ ಇಟ್ಟುಕೊಂಡು, ತಂದೆ-ತಾಯಿಗಳಿಗೆ, ಹಿರಿಯರಿಗೆ ಗೌರವ ನೀಡುವ ಗುಣಬೆಳೆಸಿಕೊಂಡರೆ ಸಮಾಜದಲ್ಲಿ ಗೌರವ ಸಿಗಲಿದೆ ಎಂದರು.
ಕಾಲೇಜಿನ ರಸ್ತೆ, ಕ್ರೀಡಾಂಗಣ ಅಭಿವೃದ್ಧಿಗೆ, ಇನ್‌ಡೋರ್ ಆಡಿಟೋರಿಯಂ ಮಾಡಲು ಸಿಎಸ್‌ಆರ್ ಂಡ್ ಅಥವಾ ಸರ್ಕಾರದ ಅನುದಾನ ಒದಗಿಸಿ ಅಭಿವೃದ್ಧಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಮಾರುಕಟ್ಟೆ ವ್ಯವಸ್ಥಾಪಕ ಸಾಧಿಕ್ ಖಾನ್, ಕಾಲೇಜಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ 10 ಲಕ್ಷ ರೂ.ಗಳವರೆಗೆ ವಿದ್ಯಾರ್ಥಿ ವೇತನ ನೀಡಿರುವುದನ್ನು ಶ್ಲಾಘಿಸಿದರು.
ಕಾಲೇಜಿನಲ್ಲಿ ಕೆಲವು ಕೋರ್ಸ್‌ಗಳನ್ನು ಮಂಜೂರು ಮಾಡುವಂತೆ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ, ಮಂಜೂರು ಮಾಡಿಸುವ ಜವಾಬ್ದಾರಿ ತೆಗೆದುಕೊಳ್ಳಲಾಗುತ್ತದೆ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ವಿ.ಶಾಂತಕುಮಾರ್, ಪುರಸಭೆ ಮಾಜಿ ಅಧ್ಯಕ್ಷರಾದ ಸಿ.ಜಗನ್ನಾಥ್, ರೇಖಾ ವೇಣುಗೋಪಾಲ್, ಅನಂತಕುಮಾರಿ ಚಿನ್ನಪ್ಪ, ಎಂ.ಮೂರ್ತಿ ಕೆ.ಸಿ.ಮಂಜುನಾಥ್, ಬಿ.ರಾಜಣ್ಣ, ಕೆ.ಆರ್.ನಾಗೇಶ್, ಎಸ್.ಆರ್.ರವಿಕುಮಾರ್, ನಾಗೇಗೌಡ, ಬಿದಲೂರು ಗ್ರಾಪಂ ಅಧ್ಯಕ್ಷ ಎಸ್.ಪಿ.ಮುನಿರಾಜು, ಮುನಿರಾಜು (ರಾಜಣ್ಣ) ಪುರುಷೋತ್ತಮ್, ಮುತ್ತುಕುಮಾರ್, ಮುಕುಂದ, ಸಂದೀಪ್, ಕೃಷ್ಣಮೂರ್ತಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಪುರಸಭೆ ಸದಸ್ಯರಾದ ಬಾಲರಾಜು, ಅಂಬರೀಶ್, ಚೈತ್ರಾ, ವಿಶ್ವನಾಥ್, ಉಪನ್ಯಾಸಕರಾದ ರವಿಚಂದ್ರ, ಕೃಷ್ಣಮೂರ್ತಿ, ಸತೀಶ್, ಅನ್ನಪೂರ್ಣಾ, ಬನಶಂಕರಿ, ರವಿಕುಮಾರ್ ಇದ್ದರು.