ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಇಲ್ಲ

bbmp news
Published on

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ, ಮಾಗಡಿ, ಬಿಡದಿಯನ್ನು ಸೇರಿಸುವುದಿಲ್ಲವೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಧೀರಜ್ ಮುನಿರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ, ಮಾಗಡಿ, ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಈ ವಿಚಾರ ಬಜೆಟ್‌ನಲ್ಲಿ ಘೋಷಣೆಯಾಗಿದ್ದು, ಜುಲೈ 16 ರಂದು ಆರ್ಥಿಕ ಇಲಾಖೆ ತಾತ್ವಿಕ ಅನುಮೋದನೆಗೆ ಸಹಮತಿ ನೀಡಿದೆ. ಈ ಯೋಜನೆಯ ಬಗ್ಗೆ ಸಾಂಖ್ಯಿಕ ಇಲಾಖೆಯ ಸಹಮತಿ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಗ್ರೇಟರ್ ಬೆಂಗಳೂರಿಗೆ 110 ಹಳ್ಳಿಗಳನ್ನು ಈಗಾಗಲೇ ಸೇರಿಸಲಾಗಿದೆ. ಸದ್ಯಕ್ಕೆ ಹೊಸ ಸೇರ್ಪಡೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನ ಮೇಲೆ ಉಂಟಾಗುವ ಒತ್ತಡ ನಿವಾರಣೆಗೆ ಸ್ಯಾಟಲೈಟ್ ಟೌನ್ ಅಗತ್ಯವಿದೆ. ಈ ಬಗ್ಗೆ ಗಮನಹರಿಸುತ್ತೇವೆ ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net