ಕನ್ಹಯ್ಯಲಾಲ್​ ಹತ್ಯೆಗೈದವರನ್ನು ಗಲ್ಲಿಗೇರಿಸಿ : ನೆಲಮಂಗಲದಲ್ಲಿ ವಿಶ್ವ ಹಿಂದು ಪರಿಷತ್​, ಬಜರಂಗದಳದಿಂದ ಹೋರಾಟ

2
Published on

ದೇವನಹಳ್ಳಿ: ಉದಯಪುರದ ಟೈಲರ್​ ಕನ್ಹಯ್ಯಲಾಲ್​ ಬರ್ಬರ ಹತ್ಯೆ ಖಂಡಿಸಿ ಜಿಲ್ಲಾ ಮತ್ತು ತಾಲೂಕು ಬಿಜೆಪಿ ವತಿಯಿಂದ ತಾಲೂಕು ಬಿಜೆಪಿ ಪಕ್ಷದ ಕಚೇರಿಯಲ್ಲಿ ಖಂಡನಾ ರ್ನಿಣಯ ಸಭೆ ನಡೆಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ. ನಾರಾಯಣಸ್ವಾಮಿ ಮಾತನಾಡಿ, ರಾಜಸ್ಥಾನದ ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್​ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸುವಂತದ್ದು. ಹೆಚ್ಚುತ್ತಿರುವ ಜಿಹಾದಿ ಮಾನಸಿಕತೆಯೇ ಈ ಹತ್ಯೆಗೆ ಕಾರಣವಾಗಿದೆ. ಉದಯಪುರದಲ್ಲಿ ಕಾಂಗ್ರೆಸ್​ ಸರಕಾರ ಆಡಳಿತದಲ್ಲಿದ್ದು, ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ನೂಪುರ್​ ಶರ್ಮ ಅವರ ಹೇಳಿಕೆಯನ್ನು ಬೆಂಬಲಿಸಿ ಟ್ವೀಟ್​ ಮಾಡಿದ್ದ ಸಂಬಂಧ ಪೊಲೀಸರು ಕನ್ಹಯ್ಯಲಾಲ್​ ಅವರನ್ನು ಠಾಣೆಗೆ ಕರೆಸಿದ್ದರು. ಅನಂತರ ತಮಗೆ ಜೀವ ಬೆದರಿಕೆ ಇರುವುದಾಗಿ ಕನ್ಹಯ್ಯಲಾಲ್​ ಅವರು ಪೊಲೀಸರ ಮೊರೆ ಹೋಗಿದ್ದರು. ಆದರೂ ಅವರಿಗೆ ಪೊಲೀಸರು ರಕ್ಷಣೆ ನೀಡದಿರುವುದು ಈ ಕೃತ್ಯದಿಂದ ಸಾಬೀತಾಗುತ್ತದೆ. ಇಂತಹ ಕೃತ್ಯಗಳು ಸಮಾಜದಲ್ಲಿ ನಡೆಯುತ್ತಿರುವುದನ್ನು ಕಾನೂನಿನ ಚೌಕಟ್ಟಿನಲ್ಲಿ ಹಿಡಿತದಲ್ಲಿಸಬೇಕು. ಹತ್ಯೆ ಮಾಡಿದ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದರು.

ರಾಜಸ್ಥಾನ ಕಾಂಗ್ರೆಸ್​ ಸರಕಾರವು ಅಲ್ಪಸಂಖ್ಯಾತರ ತುಷ್ಟಿಕರಣ ನೀತಿ ಅನುಸರಿಸುತ್ತದೆ. ಕಾಂಗ್ರೆಸ್​ ಎಲ್ಲೇ ಅಧಿಕಾರದಲ್ಲಿದ್ದರೂ ಅದು ಹಿಂದೂಗಳ ವಿರುದ್ಧ ಒಳಸಂಚು ಷಡ್ಯಂತ್ರ ಮಾಡುತ್ತ ಬಂದಿದೆ. ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮಾನಸಿಕತೆಯ ವಿರುದ್ಧ ಮತ್ತು ಇಂಥ ಕೊಲೆಗಳ ಬಗ್ಗೆ ಕಾಂಗ್ರೆಸ್ಸಿಗರ ಮತ್ತು ಬುದ್ಧೀಜಿವಿಗಳ ಮೌನ ಯಾಕೆ ಎಂದು ಪ್ರಶ್ನಿಸಿದರು.

ರಾಜ್ಯ ಬಿಜೆಪಿ ರೈತ ಮೋರ್ಚಾ ಮಾಜಿ ಉಪಾಧ್ಯಕ್ಷ ನಾರಾಯಣಗೌಡ ಮಾತನಾಡಿ, ರಾಜಸ್ಥಾನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಅಲ್ಲದೇ ಎಲ್ಲ ರಂಗಗಳಲ್ಲಿ ವಿಫಲವಾಗಿರುವ ರಾಜಸ್ಥಾನದ ಕಾಂಗ್ರೆಸ್​ ಸರಕಾರವನ್ನು ವಜಾಗೊಳಿಸಬೇಕು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರಕಾರವು ಕರ್ನಾಟಕದಲ್ಲೂ ಹಿಂದೆ ಅಲ್ಪಸಂಖ್ಯಾತರ ತುಷ್ಟಿಕರಣ ನೀತಿಯನ್ನೇ ತನ್ನದಾಗಿಸಿಕೊಂಡಿತ್ತು ಎಂದರು.

ಮಾಜಿ ಶಾಸಕ ಚಂದ್ರಣ್ಣ, ತಾಲೂಕು ಅಧ್ಯಕ್ಷ ಸುಂದರೇಶ್​, ಪ್ರಧಾನ ಕಾರ್ಯದರ್ಶಿ ಮಂಜುನಾಥ್​, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್​, ಮುಖಂಡರಾದ ಓಬದೇನಹಳ್ಳಿ ಮುನಿಯಪ್ಪ, ಮಾಧ್ಯಮ ಪ್ರಮುಖ್​ ರಮೇಶ್​, ವಿನಯ್​ ಕುಮಾರ್​, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net