ದೇವಾಂಗ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

29GDG02
ಬೆಟಗೇರಿಯ ಹಳೆ ಬನಶಂಕರಿ ದೇವಸ್ಥಾನದಲ್ಲಿ ಸೋಮವಾರ ಜರುಗಿದ ಕಾರ್ಯಕ್ರಮದಲ್ಲಿ ದೇವಾಂಗ ಸಮಾಜದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಶಾಂತಲಿಂಗ ಶ್ರೀಗಳು, ವೀಣಾ ಬರದ್ವಾಡ, ರಾವೇಂದ್ರ ಕೊಪ್ಪಳ ಹಲವರು ಇದ್ದರು.
Published on

ವಿಜಯವಾಣಿ ಸುದ್ದಿಜಾಲ ಗದಗ
ದೇವಾಂಗ ಸಮಾಜ ಬಾಂಧವರಿಂದ ಪಡೆದ ದತ್ತಿ ನಿಧಿ ದೇಣಿಗೆಯಿಂದ ಸಮಾಜದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರ ಪ್ರತಿಭೆಗೆ ತಕ್ಕಂತೆ ಪುರಸ್ಕಾರ ಮಾಡುತ್ತಿರುವ ಜಿಲ್ಲಾ ದೇವಾಂಗ ನೌಕರರ ಸಂದ ಕಾರ್ಯವು ಅತ್ಯಂತ ಸ್ತುತ್ಯಾರ್ಹವಾಗಿದೆ ಎಂದು ಬೈರನಹಟ್ಟಿ ದೊರೆಸ್ವಾಮಿ ವೀರಕ್ತಮಠದ ಶಾಂತಲಿಂಗ ಶ್ರೀಗಳು ಹೇಳಿದರು.
ಬೆಟಗೇರಿಯ ಹಳೆ ಬನಶಂಕರಿ ದೇವಸ್ಥಾನದಲ್ಲಿ ಸೋಮವಾರ ಜರುಗಿದ 2023 ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಮಕ್ಕಳು ದುಶ್ಚಟಗಳಿಗೆ ಬಲಿಯಾಗದೇ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬೆಳೆಯಬೇಕು ಎಂದರು.
ಹುಬ್ಬಳ್ಳಿ ಧಾರವಾಡ ಮಹಾಪೌರರಾದ ವೀಣಾ ಬರದ್ವಾಡ ಮಾತನಾಡಿ, ಪ್ರತಿ ವರ್ಷ ನಮ್ಮ ದೇವಾಂಗ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡುತ್ತಿರುವುದು, ಸಾಧನೆ ಮಾಡಿದವರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಅತ್ಯಂತ ಹರ್ಷ ತಂದಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ರಾವೇಂದ್ರ ಕೊಪ್ಪಳ, ಸಂವು ಕಳೆದ 23 ವರ್ಷಗಳಿಂದ ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸಮಾಜದ ಮಕ್ಕಳ ಶ್ರೇಯೋಭಿವೃದ್ದಿಗಾಗಿ ಸಹಕಾರ ನೀಡುವುದಾಗಿ ತಿಳಿಸಿದರು.
ರಾಜೇಂದ್ರ ಬರದ್ವಾಡ, ಶಿವಾನಂದ ಕಲ್ಲೂರ, ಶಿವಾನಂದ ಗಿಡ್ನಂದಿ, ಶಿವಪ್ಪ ಮಾಗುಂಡ, ಶ್ರೀಕಾಂತ ಬಡ್ಡೂರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net