ದೇವಾಂಗ ನಿಗಮ ಸ್ಥಾಪನೆಗಾಗಿ ಫೆ.10 ಕ್ಕೆ ಹೊಸದುರ್ಗದಲ್ಲಿ ಪ್ರತಿಭಟನೆ

HSD DEVANGA 25
Published on

ಹೊಸದುರ್ಗ: ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಫೆ.10ಕ್ಕೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೋರಾಟ ಸಮಿತಿ ಸಂಚಾಲಕ ಟಿ.ಮಂಜುನಾಥ್ ತಿಳಿಸಿದರು.

ಪಟ್ಟಣದ ಬನಶಂಕರಿ ಸಮುದಾಯ ಭವನದಲ್ಲಿ ಸೋಮವಾರ ಆಯೋಜಿಸಿದ್ದ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆ ಹೋರಾಟದ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು.

ದೇವಾಂಗ ಮಠದ ಶ್ರೀ ದಯಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ಪಟ್ಟಣದ ಬನಶಂಕರಿ ಸಮುದಾಯ ಭವನದಿಂದ ತಾಲೂಕು ಕಚೇರಿ ವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಸಮುದಾಯದ ಮೂಲಕಸುಬು ನೇಕಾರಿಕೆ ಆಗಿದೆ. ಶೈಕ್ಷಣಿಕ, ಆರ್ಥಿಕ ಪ್ರಗತಿಗಾಗಿ ರಾಜ್ಯ ಸರ್ಕಾರ ಕೂಡಲೇ ನಿಗಮ ಸ್ಥಾಪಿಸಿ 1 ಸಾವಿರ ಕೋಟಿ ರೂ. ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಜವಳಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಗೋ.ತಿಪ್ಪೇಶ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್.ಆರ್.ದೇವೀರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net