ಗ್ರಾಮಮಟ್ಟದಲ್ಲಿ ಕೋವಿಡ್ ತಪಾಸಣೆ

DVN 2-2
Published on

ದೇವಣಗಾಂವ: ಆಲಮೇಲ ಸಮುದಾಯ ಆರೋಗ್ಯ ಕೇಂದ್ರದಿಂದ ಗರ್ಭಿಣಿಯರು, ಟಿಬಿ, ಸಕ್ಕರೆ ಕಾಯಿಲೆ, ಹೃದ್ರೋಗಿಗಳು, ವೃದ್ಧರಿಗೆ ಹಾಗೂ ಸ್ವಯಂ ಪ್ರೇರಣೆಯಿಂದ ತಪಾಸಣೆ ಮಾಡಿಸಿಕೊಳ್ಳುವವರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ ಎಂದು ಆಲಮೇಲ ಸಮುದಾಯ ಆರೋಗ್ಯ ಕೇಂದ್ರದ ಡಾ. ಪ್ರಶಾಂತ ಧೂಮಗೊಂಡ ಹೇಳಿದರು.

ಇಲ್ಲಿನ ಮಹಿಳಾ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ ತಪಾಸಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನರು ಆರೋಗ್ಯದ ದೃಷ್ಟಿಯಿಂದ ಈ ತಪಾಸಣೆ ಅಗತ್ಯವಾಗಿದೆ ಎಂದು ತಿಳಿಸಿದರು.

ಕಿರಿಯ ಆರೋಗ್ಯ ಸಹಾಯಕಿ ಎಸ್.ಐ. ಕಲಶೆಟ್ಟಿ, ಸಂತೋಷ ಕೋರಿ, ಎ್.ಎ. ಶೇಖ, ನಫ್ರೀನ್ ನದಾಫ್, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net