ದೇವರ ದಾಸಿಮಯ್ಯರ ವಚನ ಕನ್ನಡ ಸಾಹಿತ್ಯಕ್ಕೆ ದೊರಕಿದ ಅದ್ಭುತ ಕೊಡುಗೆ

udp-2-dasimayya
Published on

ಉಡುಪಿ: ದೇವರ ದಾಸಿಮಯ್ಯನವರು 176ಕ್ಕೂ ಹೆಚ್ಚು ವಚನಗಳನ್ನು ರಚಿಸಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅದ್ಭುತ ಕೊಡುಗೆಯನ್ನಾಗಿ ನೀಡಿದ್ದಾರೆ. ಅವರ ವಚನಗಳಲ್ಲಿ ಭಕ್ತಿಯ ಸ್ವಾರಸ್ಯ ಅಡಗಿದ್ದು, ವೃತ್ತಿಯನ್ನು ನಿರ್ವಹಿಸುತ್ತಲೇ ಸಮಾಜದ ಬದಲಾವಣೆಗೆ ವಿಶೇಷವಾದ ಸೇವೆಯನ್ನು ಸಲ್ಲಿಸಿಕೊಂಡು ಬಂದಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ ಹೇಳಿದರು.

ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ನೇಕಾರ ಸಮುದಾಯ ತಮ್ಮ ಕುಲಕಸುಬಿನ ಮೂಲಕ ಜೀವನವನ್ನು ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಸಹ ದೇಶ ಹಾಗೂ ನಾಡಿನ ಏಳಿಗೆಗಾಗಿ ಶ್ರಮಿಸಬೇಕು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಉದ್ಘಾಟಿಸಿ, ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗದೇ ಮಹನೀಯರು ಸಮಾಜಕ್ಕೆ ಸಲ್ಲಿಸಿದ ಸೇವೆಗಳನ್ನು ನೆನೆಯುವ ಮೂಲಕ ಅವರಿಗೆ ಗೌರವ ಸಲ್ಲಿಸಿ ಜಯಂತಿ ಕಾರ್ಯಕ್ರಮಗಳಿಗೆ ಅರ್ಥಪೂರ್ಣ ಮಹತ್ವ ದೊರೆಯುವಂತಾಗಬೇಕು ಎಂದರು.

ವಾಣಿಜ್ಯ ತೆರಿಗೆ ನಿವೃತ್ತ ಸಹಾಯಕ ಆಯುಕ್ತ ಗಿರೀಶ್​ ಶೆಟ್ಟಿಗಾರ್​ ದಾಸಿಮಯ್ಯರ ಕುರಿತು ವಿಶೇಷ ಉಪನ್ಯಾಸ ನೀಡಿ, ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಸರಳ ರೂಪದಲ್ಲಿ ವಚನ ಸಾಹಿತ್ಯಗಳ ಆಧ್ಯಾತ್ಮಿಕ ಸಾರವನ್ನು ಪ್ರಚಾರ ಪಡಿಸಿದ ದೇವರ ದಾಸಿಮಯ್ಯನವರು, ಅನ್ಯಾಯ, ಅನಾಚಾರ, ವಾಮಮಾರ್ಗಗಳಿಂದ ಗಳಿಸಿರುವುದು ಎಂದಿಗೂ ನಮಗೆ ದಕ್ಕುವುದಿಲ್ಲ ಎಂಬುದನ್ನು ವಚನಗಳ ಮೂಲಕ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದರು. ಜಿಪಂ ಉಪಕಾರ್ಯದರ್ಶಿ ಶ್ರೀನಿವಾಸ್​ ರಾವ್​ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ ಜಿಲ್ಲಾಧ್ಯಕ್ಷ ರವಿ ಶೆಟ್ಟಿಗಾರ್​, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಲಕ್ಷ$್ಮಣ ಕೊಡಿಯಾಲ್​ ಬೈಲ್​ ಮತ್ತಿತರರು ಉಪಸ್ಥಿತರಿದ್ದರು. ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಉಪನ್ಯಾಸಕ ಪ್ರದಿಪ್​ ಹಾವಂಜೆ ನಿರೂಪಿಸಿದರು. ಜಯರಾಮ್​ ಶೆಟ್ಟಿಗಾರ್​ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net