

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಏ. 2ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ಶಾಸಕ ಅರವಿಂದ ಚಂದ್ರಕಾ0ತ ಬೆಲ್ಲದ ಅಧ್ಯಕ್ಷತೆ ವಹಿಸುವರು. ರಾಣೆಬೆನ್ನೂರು ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಎಸ್.ಕೆ. ದುರ್ಗದಸೀಮಿ ವಿಶೇಷ ಉಪನ್ಯಾಸ ನೀಡುವರು.