ದೇವರ ದಾಸಿಮಯ್ಯ ಜಯಂತಿ ಪೂರ್ವಭಾವಿ ಸಭೆ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿ ಆಚರಣೆ; ಶಿವಾನಂದ

RAICHUR
RAICHUR
Published on

ರಾಯಚೂರು ದೇವರ ದಾಸಿಮಯ್ಯ ಅವರ ಸಂದೇಶಗಳನ್ನು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿ ಆಚರಿಸಲಾಗುತ್ತಿದೆ ಎಂದು ಅಪರ ಜಿಲ್ಲಾಽಕಾರಿ ಶಿವಾನಂದ ತಿಳಿಸಿದರು.

ನಗರದ ಜಿಲ್ಲಾಽಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ದೇವರ ದಾಸಿಮಯ್ಯ ಜಯಂತಿ ಆಚರಣೆ ಸಂಬAಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳನ್ನು ಆಚರಿಸಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದು ಅವರು ಹೇಳಿದರು.

ಏ.೦೨ರಂದು ದೇವರ ದಾಸಿಮಯ್ಯ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಅಂದು ಮೆರವಣಿಗೆ ಪ್ರಾರಂಭವಾಗುವ ಸ್ಥಳವಾದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಶಾಮಿಯಾನ ಸ್ವಚ್ಛತೆ ಹಾಗೂ ಚೇರ್‌ಗಳ ವ್ಯವಸ್ಥೆ ಹಾಗೂ ಜಯಂತಿಯ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳವಾದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮAದಿದಲ್ಲಿ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಹಾಗೂ ಊಟದ ಜÁಗಕ್ಕೆ ಶಾಮಿಯಾನ ವ್ಯವಸ್ಥೆಯನ್ನು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು ಎಂದು ಸಂಬAಽಸಿದ ಅಽಕಾರಿಗಳಿಗೆ ಸೂಚಿಸಿದರು.

ವಿವಿಧ ಇಲಾಖೆಯ ಅಽಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಿರಬೇಕು. ಅಲ್ಲದೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜು, ಗ್ರಾಮ ಪಂಚಾಯತಿ ಹಾಗೂ ಸರ್ಕಾರಿ ಇತರೆ ಕಚೇರಿಗಳಲ್ಲಿ ದೇವರ ದಾಸಿಮಯ್ಯ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಕ್ರಮಕೈಗೊಳ್ಳುವಂತೆ ಸಂಬAಽಸಿದ ಅಽಕಾರಿಗಳಿಗೆ ಸೂಚನೆ ನೀಡಿಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗೂರು, ಪಾಲಿಕೆ ಸಮುದಾಯ ಸಂಘಟನಾ ಅಽಕಾರಿ ಕೃಷ್ಣ ಕಟ್ಟಿಮನಿ, ಸಮಾಜದ ಮುಖಂಡರಾದ ಪಿ.ಗೋವಿಂದರಾಜ್, ಮ್ಯಾಕ್ಸೆವೇಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ವನಜÁ, ದೊಡ್ಡ ವಿರೇಶ, ನಾರಾ ವೆಂಕಟೇಶ್, ವಿನಿ ಉದಯ, ಗಾಯಿತ್ರಿ ಸೇರಿದಂತೆ ವಿವಿಧ ಇಲಾಖೆಯ ಅಽಕಾರಿಗಳು ಹಾಗೂ ಇತರರು ಇದ್ದರು.

 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net