ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

dhp-12-1
Published on

ದೇವರಹಿಪ್ಪರಗಿ: ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ಹಾಗೂ ಇಂಧನ ದರ ಏರಿಕೆ ಖಂಡಿಸಿ ದೇವರಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನೆ ಕೈಗೊಂಡು ತಹಸೀಲ್ದಾರ್ ಬಿ.ಎಸ್.ಕಡಕಭಾವಿ ಮೂಲಕ ರಾಷ್ಟ್ರಪತಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಮಾಯಿಸಿದ ನಂತರ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಟರು. ಅಂಬೇಡ್ಕರ್ ವತ್ತದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತ ತಹಸೀಲ್ದಾರ್ ಕಚೇರಿ ಆವರಣ ತಲುಪಿ ಸಭೆ ನಡೆಸಿದರು.

ಕೆಪಿಸಿಸಿ ಸದಸ್ಯ ಬಿ.ಎಸ್.ಪಾಟೀಲ(ಯಾಳಗಿ) ಮಾತನಾಡಿ, ಕೇಂದ್ರ ಸರ್ಕಾರ ಬಂಡವಾಳಶಾಹಿ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಹೀಗಾಗಿ ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದಿದೆ. ತೈಲ ಬೆಲೆ ಸೇರಿದಂತೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ವಿಲವಾಗಿದೆ ಎಂದು ಆರೋಪಿಸಿದರು.

ಕೆಪಿಸಿಸಿ ಕಾರ್ಯದರ್ಶಿ ಚಂದ್ರಶೇಖರ ರಾಠೋಡ , ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ವಿಶ್ವನಾಥ ಮಠ, ಪ್ರಕಾಶ ಗುಡಿಮನಿ, ಸಂಗಮೇಶ ಛಾಯಾಗೋಳ, ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸಂಗನಗೌಡ ಹರನಾಳ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಲಲಿತಾ ದೊಡಮನಿ, ಹೂವಿನಹಿಪ್ಪರಗಿ ಬ್ಲಾಕ್ ಅಧ್ಯಕ್ಷ ಬಾಳಾಸಾಹೇಬಗೌಡ ಪಾಟೀಲ, ಪಟ್ಟಣ ಪಂಚಾಯಿತಿ ಸದಸ್ಯ ಬಶೀರಶೇಠ ಬೇಪಾರಿ, ಎಸ್.ಟಿ. ಘಟಕದ ಅಧ್ಯಕ್ಷ ಸಾಯಿಕುಮಾರ ಬಿಸನಾಳ, ಯುವ ಕಾಂಗ್ರೆಸ್ ಅಧ್ಯಕ್ಷ ಮುನೀರ್ ಬಿಜಾಪೂರ, ಆನಂದ ಚಟ್ಟರಕಿ, ಶಂಕರಗೌಡ ಪಾಟೀಲ(ಯರನಾಳ), ಶಬ್ಬೀರ ಮುಲ್ಲಾ, ದಾದಾ ಬೇಪಾರಿ, ಎ.ಡಿ.ಮುಲ್ಲಾ, ಮುರ್ತುಜಾ ತಾಂಬೋಳಿ, ಇಸ್ಮಾಯಿಲ್ ಜುಮನಾಳ, ಸಿದ್ಧನಗೌಡ ಬಿರಾದಾರ(ಚಿಕ್ಕರೂಗಿ), ರಮೇಶ ದಳವಾಯಿ, ತೌಫಿಕ್ ನದ್ಾ ಸೇರಿದಂತೆ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net