ಡಿ.ದೇವರಾಜ ಅರಸ್ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ

arasu
Published on

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಚಾಲನೆ ನೀಡಿದರು.


ಮೂಲ್ಕಿ ಜಯಾನಂದ ದೇವಾಡಿಗ ಅವರಿಗೆ ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಚಿವರು ಹಿಂದುಳಿದ ವರ್ಗಗಳ ವೃತ್ತಿ ಕುಲಕಸುಬುಗಳ ವಿವಿಧ ಮಳಿಗೆಗಳಿಗೆ ಚಾಲನೆ ನೀಡಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್, ಸಹಾಯಕ ಆಯುಕ್ತ ಮದನ್ ಮೋಹನ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ರಶ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net