ಅರಸು ನಿಗಮದ ಸೌಲಭ್ಯಗಳ ಪ್ರಚಾರ ಅಗತ್ಯ

web 2
Published on

ಧಾರವಾಡ: ನಿಗಮದ ವಿವಿಧ ಯೋಜನೆಗಳು ಸಮಾಜದ ಕಟ್ಟ ಕಡೆಯ ಜನಸಾಮಾನ್ಯರಿಗೆ ಸೌಲಭ್ಯ ದೊರಕುವಂತೆ ನಿಗಮದ ಅಧಿಕಾರಿಗಳು ಚುರುಕಾಗಿ ಕೆಲಸ ನಿರ್ವಹಿಸಬೇಕು. ಯೋಜನೆಗಳ ಬಗ್ಗೆ ಹೆಚ್ಚೆಚ್ಚು ಪ್ರಚಾರ ಮಾಡಬೇಕು ಎಂದು ಬೆಂಗಳೂರಿನ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ  ನಿಗಮದ ವ್ಯವಸ್ಥಾಪಕ ನಿರ್ದೇಶಕ ಕಾಂತರಾಜು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ನಡೆದ ವಿವಿಧ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಿಗಮದ ಯೋಜನೆಗಳಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಗ್ರಾಮಒನ್, ಕರ್ನಾಟಕ ಒನ್, ಹುಬ್ಬಳ್ಳಿ- ಧಾರವಾಡ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಜನಸಾಮಾನ್ಯರಿಗೆ ಮಾಹಿತಿ ನೀಡಬೇಕು. ಚೈತನ್ಯ ಸ್ವಯಂ ಉದ್ಯೋಗ, ಅರಿವು, ಶೈಕ್ಷಣಿಕ ಯೋಜನೆ, ವಿದೇಶಿ ವ್ಯಾಸಂಗ, ಗಂಗಾಕಲ್ಯಾಣ ಯೋಜನೆಗಳ ಬಗ್ಗೆ ಪ್ರಚಾರ ಮಾಡಬೇಕು ಎಂದರು.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಮರೇಗೌಡ ಮಾಲಿಪಾಟೀಲ, ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ ಪಾಗೋಜಿ, ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮುರಳಿಧರ ಉಪಸ್ಥಿತರಿದ್ದರು. ಜಿಲ್ಲಾ ಪ್ರಭಾರ ವ್ಯವಸ್ಥಾಪಕ ಕಿರಣ ದಿಡ್ಡಿಬಾಗಿಲು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net