ದೇವರಾಜ ಅರಸು ಜನ್ಮದಿನಾಚರಣೆ 20ರಂದು

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 109ನೇ ಜನ್ಮದಿನ ಸಮಾರಂಭವನ್ನು ಆ. 20ರಂದು ಬೆಳಗ್ಗೆ 11ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್​ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್​ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರಾದ ಅಬ್ಬಯ್ಯ ಪ್ರಸಾದ, ಭರಮಗೌಡ ಅಲಗೌಡ ಕಾಗೆ, ಜೆ.ಎನ್​.ಗಣೇಶ, ಎನ್​.ಎಚ್​ ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್​.ಪಾಟೀಲ್​, ಎಸ್​.ವಿ. ಸಂಕನೂರ, ಪ್ರದಿಪ ಶೆಟ್ಟರ, ಮೇಯರ್​ ರಾಮಪ್ಪ ಬಡಿಗೇರ, ಹುಡಾ ಅಧ್ಯಕ್ಷ ಶಾಕೀರ ಸನದಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಇತರರು ಅತಿಥಿಗಳಾಗಿ ಪಾಲ್ಗೊಳ್ಳುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಜನಪದ ವಿಶ್ವ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ನಾಗರಾಜ.ಎಸ್​ ವಿಶೇಷ ಉಪನ್ಯಾಸ ನೀಡುವರು ಎಂದು ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net