ದೂರದೃಷ್ಟಿಯ ಚಿಂತನೆ ಹೊಂದಿದ್ದ ಆಡಳಿತಗಾರ : ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಹೇಳಿಕೆ :

devraj
ತಾ.ಪಂನಲ್ಲಿ ನಡೆದ ದೇವರಾಜ ಅರಸು ಜನ್ಮದಿನಾಚರಣೆಯನ್ನು ಬಂಟ್ವಾಳ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಉದ್ಘಾಟಿಸಿದರು. ತಹಸೀಲ್ದಾರ್ ಅರ್ಚನಾ ಭಟ್, ತಾ.ಪಂ ವಿಸ್ತರಣಾಧಿಕಾರಿ ನರಸಿಂಹ ಮೂರ್ತಿ ಮೊದಲಾದವರಿದ್ದರು.
Published on

ಬಂಟ್ವಾಳ: ವಿದ್ಯಾರ್ಥಿಗಳು ದೇವರಾಜು ಅರಸು ಅವರ ದೂರದೃಷ್ಟಿಯ ಚಿಂತನೆಗಳ ಬಗ್ಗೆ ಅಧ್ಯಯನ ನಡೆಸಿ, ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಂಟ್ವಾಳ ತಾಲೂಕು ತಹಸೀಲ್ದಾರ್ ಅರ್ಚನಾ ಭಟ್ ಹೇಳಿದರು.

ಬಂಟ್ವಾಳ ತಾಪಂ, ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಮಂಗಳವಾರ ಬಿ.ಸಿ.ರೋಡ್‌ನಲ್ಲಿ ದೇವರಾಜು ಅರಸು ಅವರ 109ನೇ ಜನ್ಮದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಂಟ್ವಾಳ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಉದ್ಘಾಟಿಸಿ ಮಾತನಾಡಿ, ದೇವರಾಜ ಅರಸು ರಾಜಕೀಯದ ಮೂಲಕವೂ ಸಾಮಾಜಿಕ ಸುಧಾರಣೆ ಸಾಧ್ಯ ಎನ್ನುವುದನ್ನು ತೋರಿಸಿಕೊಟ್ಟವರು. ಮುಖ್ಯಮಂತ್ರಿಯಾಗಿದ್ದ ಎರಡು ಅವಧಿಯಲ್ಲಿಯೂ ಸಾಮಾಜಿಕ ಪರಿವರ್ತನೆಯ ಕಾರ್ಯ ನಡೆಸಿದವರು ಎಂದರು.

ತಾ.ಪಂ ವಿಸ್ತರಣಾಧಿಕಾರಿ ನರಸಿಂಹ ಮೂರ್ತಿ, ಇಲಾಖಾ ವಸತಿನಿಲಯಗಳ ಮೇಲ್ವಿಚಾರಕರಾದ ಪುಷ್ಪಲತಾ, ಭವಾನಿ, ಅರುಣ್, ಅಂಬುಜಾಕ್ಷಿ, ವಿಶ್ವನಾಥ್ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಸತಿ ನಿಲಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದೇವರಾಜ ಅರಸು ಜನ್ಮ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು. ವಾಮದಪದವು ನಿಲಯ ಮೇಲ್ವಿಚಾರಕಿ ಭವಾನಿ ಕಾರ್ಯಕ್ರಮ ನಿರ್ವಹಿಸಿದರು. ದೀಪಾ, ಜೀವಿತಾ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net