

ಕಡೂರು: ದೇವರಾಜ ಅರಸು ಅವರ ಜನಪರ ಯೋಜನೆಗಳು ಅಸ್ಮರಣೀಯ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ತಾಪಂನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ದೇವರಾಜ ಅರಸು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿಯೇ ರಾಜ್ಯಾದ್ಯಂತ ವಸತಿ ನಿಲಯಗಳನ್ನು ಸ್ಥಾಪಿಸಿ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಶ್ರಮಿಸಿದ್ದರು ಎಂದರು. ಜೀತ ಪದ್ಧತಿ ನಿಷೇಧಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅರ್ಥ ಕಲ್ಪಿಸಿಕೊಟ್ಟರು. ಜನಸಂಖ್ಯೆ ಆಧಾರದ ಮೇಲೆ ಹಿಂದುಳಿದ ವರ್ಗಗಳಿಗೂ ಮೀಸಲಾತಿ ಜಾರಿಗೆ ತಂದು ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದರು ಎಂದು ಹೇಳಿದರು. ದೇವರಾಜ ಅರಸು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ್ದರು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಅರಸು ಆಡಳಿತದ ಮಾದರಿಯಲ್ಲಿ ಸಾಗುತ್ತಿದ್ದು, ದೀನ, ದಲಿತರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.ಪುರಸಭಾ ಸದಸ್ಯ ತೋಟದಮನೆ ಮೋಹನ್‌ಕುಮಾರ್, ಡಿಎಸ್‌ಎಸ್ ಮುಖಂಡ ಟಿ.ಮಂಜಪ್ಪ ಮಾತನಾಡಿದರು. ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ತಹಸೀಲ್ದಾರ್ ಎಂ.ಪಿ.ಕವಿರಾಜ್, ಬಿಸಿಎಂ ವಿಸ್ತರಣಾಧಿಕಾರಿ ಮಂಜುನಾಥ್, ಮುಖ್ಯಾಧಿಕಾರಿ ಕೆ.ರುದ್ರೇಶ್, ಪುರಸಭಾ ಸದಸ್ಯ ಶ್ರೀಕಾಂತ್, ದಾಸಯ್ಯನಗುತ್ತಿ ಚಂದ್ರಪ್ಪ, ಮಂಜುನಾಥ್, ಕೆ.ಜಿ.ಶ್ರೀನಿವಾಸ್‌ಮೂರ್ತಿ, ಬಿ.ಟಿ.ಗಂಗಾಧರ್‌ನಾಯ್ಕ, ಕಾಶಿನಾಥ್ ಬಿಸಿಎಂ ವಸತಿ ನಿಲಯದ ಮೇಲ್ವಿಚಾರಕರಾದ ಅನಿಲ್‌ಕುಮಾರ್, ದೇವರಾಜ್, ಮಮತಾ, ಕವಿತಾ, ವಿದ್ಯಾ, ಪ್ರೇಮ್‌ಕುಮಾರಿ, ರಮ್ಯಾ, ಮಂಜುನಾಥ್, ಪ್ರದೀಪ್ ಇತರರಿದ್ದರು.