ಹಿಂದುಳಿದ ವರ್ಗಗಳ ಹರಿಕಾರ ದೇವರಾಜ ಅರಸು

SVR ARASU
Published on

ಸವಣೂರ: ಹಿಂದುಳಿದ ವರ್ಗಗಳ ಕಲ್ಯಾಣ ಕ್ರಾಂತಿ ಮಾಡಿದ ಕೀರ್ತಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ ಹೇಳಿದರು.

ಪಟ್ಟಣದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇವರಾಜ ಅರಸು ಅವರ ದೂರದೃಷ್ಟಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು. ಹಾವನೂರು ಆಯೋಗದಂತಹ ಪ್ರಮುಖ ನಿರ್ಧಾರಗಳನ್ನು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ದೊರೆಯುತ್ತಿದೆ. ಗೇಣಿ ಹೋರಾಟದ ಅನುಷ್ಠಾನ ಆಗದಿದ್ದರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗ ರಚಿಸದಿದ್ದರೆ ಈವರೆಗೂ ಬಹು ಸಂಖ್ಯಾತರಿಗೆ ನ್ಯಾಯ ಸಿಗುತ್ತಿರಲಿಲ್ಲ ಎಂದು ನೆನೆದರು.

ತಹಸೀಲ್ದಾರ್ ರವಿಕುಮಾರ ಕೊರವರ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಿ. ದೇವರಾಜ ಅರಸು ಅವರನ್ನು ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಹರಿಕಾರ ಎಂದು ಕರೆಯಲಾಗುತ್ತಿದೆ. ಹಿಂದುಳಿದ ವರ್ಗದ ಆಯೋಗವನ್ನು ಎಲ್.ಜಿ. ಹಾವನೂರು ಅವರ ನೇತೃತ್ವದಲ್ಲಿ ಅರಸು ಅವರು ಭೂ ಸುಧಾರಣೆ ಮತ್ತು ಉಳುವವನೇ ಹೊಲದೊಡೆಯ ಕಾನೂನುಗಳನ್ನು ಜಾರಿಗೆ ತಂದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದರು.

ಬಿಸಿಎಂ ಇಲಾಖೆ ಅಧಿಕಾರಿ ಸುಲೋಚನಾ ಕಟ್ನೂರ, ಬಿಇಒ ಎಂ.ಎಫ್. ರ್ಬಾ, ತಾಪಂ ಇಒ ಬಸವರಾಜ ಶಿಡೆನೂರ, ಸಿಡಿಪಿಒ ಉಮಾ ಕೆ.ಎಸ್, ಆರೋಗ್ಯ ಇಲಾಖೆ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಎಫ್. ಹನಕನಳ್ಳಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜೀವನಕುಮಾರ ಪಮ್ಮಾರ, ನಿಲಯ ಪಾಲಕರಾದ ಜಯಶ್ರೀ ಅಚಲಕರ, ಶಿವಶಂಕರ ಮಣ್ಣೂರ, ಸಿ.ಕೆ. ಹಿರೇಮಠ, ಚಂದ್ರು ಪಾರಮ್ಮನವರ, ಎಸ್.ಬಿ. ಸಣ್ಣಗೌಡ್ರ, ಪುರಸಭೆ ವ್ಯವಸ್ಥಾಪಕ ಮಹೇಶ ದೊಡ್ಡಣ್ಣನವರ, ಪ್ರಮುಖರಾದ ರಾಮಣ್ಣ ಅಗಸರ, ಪರಶುರಾಮ ಈಳಗೇರ, ಕೆಡಿಪಿ ಸದಸ್ಯರಾದ ಬಾಷಾಸಾಬ್ ಅಂಗಡಿ, ಪಂಚಪ್ಪ ತೊಳಲಕೊಪ್ಪದ, ಹಿರಿಯಕ್ಕ ಪಡೆಕ್ಕನವರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net