

ಬೆಂಗಳೂರು: ದೇವರಾಜು ಅರಸು ಟ್ರಕ್ ಟರ್ಮಿನಲ್ ನಡೆದಿರುವ 47.10 ಕೋಟಿ ರೂ.ಹಗರಣ ಸಂಬಂಧ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಸ್. ಶಂಕರಪ್ಪ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಉಪನಿರ್ದೇಶಕರಾಗಿದ್ದ ಇವರು, ದೇವರಾಜು ಅರಸು ಟ್ರಕ್ ಟರ್ಮಿನಲ್ ಎಂಡಿ ಹುದ್ದೆಗೆ ನಿಯೋಜನೆಗೊಂಡಿದ್ದರು. ಈ ವೇಳೆ ಅಕ್ರಮ ಎಸಗಿದ್ದ ಬಗ್ಗೆ ಶಂಕರಪ್ಪ ವಿರುದ್ಧ ಸಿಐಡಿ ಅಧಿಕಾರಿಗಳು ಕೇಸ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಗ್ರೂಪ್ "ಎ' ಹಿರಿಯ ಶ್ರೇಣಿಯ ಅಧಿಕಾರಿಯಾಗಿದ್ದು, ಸರ್ಕಾರವು ಸಕ್ಷಮ ಪ್ರಾಧಿಕಾರವಾಗಿರುವ ಕಾರಣ ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಕರ್ನಾಟಕ ನಾಗರಿಕ ಸೇವಾ ಅನ್ವಯ ಮುಂದಿನ ಕ್ರಮ ಕೈಗೊಳ್ಳುವಂತೆ ಕೋರಲಾಗಿತ್ತು. ಹೀಗಾಗಿ, ಅಮಾನತುಗೊಳಿಸಲಾಗಿದೆ ಎಂದು ಕನ್ನಡ, ಸಂಸತಿ ಮತ್ತು ವಾರ್ತಾ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖವಾಗಿದೆ.